ಕೆರೆಗೆ ನೀರು ಬಂತು, ರೈತರು ಹರ್ಷ
ಇಂಡಿ: ತಾಲ್ಲೂಕಿನ ತಡವಲಗಾ ಗ್ರಾಮದ ಕೆರೆಗೆ ನೀರು ಹರಿದು ಬಂದ ಹಿನ್ನೆಲೆ ರೈತರು ಹರ್ಷ ವ್ಯಕ್ತ ಪಡಿಸಿದ್ದಾರೆ.
ತಾಲೂಕಿನ ತಡವಲಗಾ ಗ್ರಾಮದ ಜೋಡುಗುಡಿ ಹತ್ತೀರ ರಾಷ್ಟ್ರೀಯ ಹೆದ್ದಾರಿ ತಡೆದು ಶುಕ್ರವಾರ ಪ್ರತಿಭಟನೆ ಮಾಡಲಾಗಿತ್ತು. ಜನ- ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲ. ಈ ಭಾಗದಲ್ಲಿ ಕುಡಿಯುವ ನೀರಿನ ದೊಡ್ಡ ಪ್ರಮಾಣದ ಹಾಹಾಕಾರವಿದ್ದು, ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ. ಕೂಡಲೇ ಗುತ್ತಿ ಬಸವಣ್ಣ ಮತ್ತು ತಿಡಗುಂದಿ ಶಾಖಾ ಕಾಲುವೆ ಕೊನೆಯ ಭಾಗದ ಕೆರೆಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಪ್ರತಿಭಟನೆ ಮಾಡಲಾಗಿತ್ತು.
ತಡವಲಗಾ, ಅರ್ಥಗಾ, ಕೊಟ್ನಾಳ, ನಿಂಬಾಳ, ಸೇರಿದಂತೆ ಇನ್ನಿತರ ಕೆರೆಗಳಿಗೆ ಹಾಗೂ ಗುತ್ತಿ ಬಸವಣ್ಣ ಕಾಲುವೆಯ ಕೊನೆಯ ಭಾಗದ ರೈತರಿಗೆ ರೂಗಿ, ಹಂಜಗಿ, ಚಿಕ್ಕಬೇವನೂರ, ಬೋಳೆಗಾಂವ, ಗಣವಲಗಾ, ತೆನ್ನೆಳ್ಳ್ಳಿ
ಗ್ರಾಮಗಳ ರೈತರಿಗೆ ಹಾಗೂ ಜಾನುವಾರುಗಳಿಗೆ
ನೀರಿಲ್ಲದೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಈಗ
ಕೆರೆಗಳನ್ನು ತುಂಬಿದರೆ ಆಯಾ ಗ್ರಾಮಗಳ
ರೈತರಿಗೆ ಅನುಕೂಲವಾಗುತ್ತದೆ ಎಂದು ರೈತರು
ತಿಳಿಸಿದರು.
ಈ ಸಂದರ್ಭದಲ್ಲಿ ಧರಣಿ ನಿರತ ಸ್ಥಳಕ್ಕೆ ಕೆಬಿಜೆಎನ್‍ಎಲ್ ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ರೈತರು ಪ್ರತಿಭಟನೆ ಕೈ ಬಿಡಲಿಲ್ಲ. ನಮ್ಮ ಸಮಸ್ಯೆ ಈಡೇರಿಸಬೇಕು. ಅಲ್ಲಿಯವರೆಗೂ ನಾವು ಧರಣಿ ಹಿಂಪಡೆಯಲ್ಲ ಎಂದು ಪಟ್ಟು ಹಿಡಿದಿದ್ದರು. ಆದರೆ ಇಂದು ತಡವಲಗಾ ಕೆರೆಗೆ ನೀರು ಬಂದ್ ಹಿನ್ನೆಲೆ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಭೀಮಸೇನಾ ಟೋಕರೆ,
ಮಲ್ಲನಗೌಡ ಪಾಟೀಲ, ಚಿದಾನಂದ ಮದರಿ, ಚನ್ನಪ್ಪ ಮಿರಗಿ, ವಿಠೋಬಾ ಹುಣಶ್ಯಾಳ, ಮಲ್ಲಪ್ಪ ನೇಕಾರ, ಮಹಾದೇವ ಸುದಾಮ, ಈರಪ್ಪಾ ಗೋಟ್ಯಾಳ, ಸುಭಾಷ ಗೊಳ್ಳಗಿ, ಶರಣಪ್ಪ ತಾರಾಪೂರ, ಗುರಪಾದ ತಾರಾಪೂರ, ಅಂಬಣ್ಣ ಪಂತೋಜಿ, ಭೀಮರಾಯ ಪುಟಾಣಿ, ಭೀಮರಾಯ ಬಿರಾದಾರ, ಭೀಮು ಕಪಾಲಿ, ಹೂವಪ್ಪಾ ಶಿರಶ್ಯಾಡ ಸೇರಿದಂತೆ ನೂರಾರು ರೈತರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇಂಡಿ: ಧರಣಿ ನಿರತ ಪ್ರತಿಭಟನಾ ಸ್ಥಳಕ್ಕೆ ಕೆಬಿಜೆಎನ್‍ಎಲ್ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರು.
ಇಂಡಿ : ತಡವಲಗಾ ಕೆರೆಗೆ ನೀರು ಬಂದ ಭಾವಚಿತ್ರ