• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರ್ಕಾರದ ಯೋಜನೆಗಳ ಲಾಭ ದೊರಕಿಸಿ ತಾಂಡಾಗಳ ಅಭಿವೃದ್ದಿಗಾಗಿ ಒತ್ತು ನೀಡಿ ಕಾರ್ಯನಿರ್ವಹಿಸಿ -ನಿಗಮದ ಅಧ್ಯಕ್ಷ ಜಯದೇವನಾಯ್ಕ ಸೂಚನೆ

      Voice of janata

      July 7, 2024
      0
      ಸರ್ಕಾರದ ಯೋಜನೆಗಳ ಲಾಭ ದೊರಕಿಸಿ ತಾಂಡಾಗಳ ಅಭಿವೃದ್ದಿಗಾಗಿ ಒತ್ತು ನೀಡಿ ಕಾರ್ಯನಿರ್ವಹಿಸಿ -ನಿಗಮದ ಅಧ್ಯಕ್ಷ ಜಯದೇವನಾಯ್ಕ ಸೂಚನೆ
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರದ ಯೋಜನೆಗಳ ಲಾಭ ದೊರಕಿಸಿ ತಾಂಡಾಗಳ ಅಭಿವೃದ್ದಿಗಾಗಿ ಒತ್ತು ನೀಡಿ ಕಾರ್ಯನಿರ್ವಹಿಸಿ
      -ನಿಗಮದ ಅಧ್ಯಕ್ಷ ಜಯದೇವನಾಯ್ಕ ಸೂಚನೆ

      ವಿಜಯಪೂರ. ಜುಲೈ 6 : ಅತಿ ಹೆಚ್ಚು ತಾಂಡಾಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿನ ತಾಂಡಾಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ, ಶೈಕ್ಷಣಿಕ ಸುಧಾರಣೆಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ದೊರಕಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎನ್.ಜಯದೇವನಾಯ್ಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಂಡಾಗಳಲ್ಲಿರುವ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತಾಂಡಾಗಳಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ- ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಕಾಲಕಾಲಕ್ಕೆ ತಾಂಡಾಗಳಿಗೆ ಭೇಟಿ ನೀಡಿ, ಗಂಭೀರವಾದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಪ್ರಾಥಮಿಕ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಇಲಾಖೆ ಪಾತ್ರ ಅತಿ ಮುಖ್ಯವಾಗಿರುವುದರಿಂದ ತಾಂಡಾಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಂಡು ಶಿಕ್ಷಕರ ನಿಯೋಜನೆಗೆ ಕ್ರಮ ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ವಹಿಸಬೇಕು. ಕನ್ನಡ, ಇಂಗ್ಲಿಷ್ ಭಾಷೆಗಳ ವ್ಯಾಕರಣ ಕಲಿಯುವಿಕೆ ತರಬೇತಿಗಳನ್ನು ಹಮ್ಮಿಕೊಳ್ಳಬೇಕು ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಮುಖ್ಯ ವಿಷಯಗಳಲ್ಲಿ ಮಕ್ಕಳಿಗೆ ಕರಗತಗೊಳಿಸುವ ಮೂಲಕ ಅವರನ್ನು ಉತ್ತೇಜಿಸಬೇಕು ಎಂದು ಅವರು ಸೂಚನೆ ನೀಡಿದರು.

      ಸಭೆಯಲ್ಲಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಅಶೋಕ ಲಿಮಕರ ಅವರು ಸಭೆಗೆ ಮಾಹಿತಿ ನೀಡಿ, ಈಗಾಗಲೇ ಜಿಲ್ಲೆಯಲ್ಲಿ ಮಿಷನ್ ವಿದ್ಯಾಪುರ ಯೋಜನೆ ಅನುಷ್ಠಾನಗೊಳಿಸಿ, ಆನ್‍ಲೈನ್ ಮೂಲಕ ಸಂಜೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಮುಖ ವಿಷಯಗಳ ಕುರಿತು ಪಾಠ ಬೋಧನೆ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರಥಮಾದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

      ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶಿಕ್ಷಣ ಒದಗಿಸಲು ಆದ್ಯತೆ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಗುಣಮಟ್ಟದ ಆಹಾರ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿರುವ ಕುರಿತು ಖಚಿತಪಡಿಸಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಸಮಯಕ್ಕನುಗುಣವಾಗಿ ಸಾರಿಗೆ ಬಸ್‍ಗಳ ವ್ಯವಸ್ಥೆ ಕಲ್ಪಿಸಬೇಕು. ತಾಂಡಾಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
      ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲು ಅಧಿಕಾರಿ, ಸಿಬ್ಬಂದಿಗಳು ಇ-ಸ್ವತ್ತು ನೋಂದಣಿ ಮಾಡಲು ತಾಂಡಗಳಿಗೆ ತೆರಳಬೇಕು. ಸರ್ಕಾರ ನಿಗಧಿಪಡಿಸಿದ ಶುಲ್ಕದಲ್ಲಿ ಇ-ಸ್ವತ್ತು ನೊಂದಣಿಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಗಂಗಾ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಸಮರ್ಪಕವಾಗಿ ವಿದ್ಯುತ್ ಸಂಪರ್ಕ, ನಿರಂತರ ಜ್ಯೋತಿ ವಿದ್ಯುತ್ ಪೂರೈಸುವಂತೆ ಸೂಚಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಹೆಸ್ಕಾಂ ಅಧಿಕಾರಿ ಈಗಾಗಲೇ ಅರ್ಹ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದ ಫಲಾನುಭವಿಗಳಿಗೆ ಯೋಜನೆ ಒದಗಿಸಲು ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.

      ತಾಂಡಾಗಳಲ್ಲಿ ಸಮರ್ಪಕ ಕುಡಿಯುವ ನೀರಿನ ಘಟಕ, ರಸ್ತೆ, ಬಸ್ ಸೌಕರ್ಯ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ದೊರಕಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸರಕಾರ ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಯಾವುದೇ ಕಾರಣಕ್ಕೂ ಸರಕಾರದ ಯೋಜನೆಗಳ ಸೌಲಭ್ಯಗಳಿಂದ ಅರ್ಹರು ವಂಚಿತರಾಗದಂತೆ ನೋಡಿಕೊಂಡು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಸರ್ಕಾರದ ಸೌಲತ್ತುಗಳನ್ನು ಜನರಿಗೆ ದೊರಕಿಸಿ ಅನುಕೂಲ ಕಲ್ಪಿಸಬೇಕು. ಜಿಲ್ಲೆಯಲ್ಲಿನ ತಾಂಡಾಗಳಿಗೆ ಲಿಂಕ್ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ, ಸಾರಿಗೆ ಸೌಕರ್ಯ, ಶಿಕ್ಷಕರ ಕೊರತೆ, ಶಿಕ್ಷಣ ಗುಣಮಟ್ಟಕ್ಕೆ ಒತ್ತು, ಬೀದಿ ದೀಪ ನಿರ್ವಹಣೆ, ವಿದ್ಯುತ್ ಸಂಪರ್ಕ, ಅಂಗನವಾಡಿಗಳ ಕಾರ್ಯನಿರ್ವಹಣೆ, ನಿರಂತರ ಜ್ಯೋತಿ ಸಂಪರ್ಕ, ಗಂಗಾ ಕಲ್ಯಾಣ ಬೊರವೆಲ್‍ಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ವಿಶೇಷ ಗಮನ ಹರಿಸಿ ತಾಂಡಾಗಳ ಅಭಿವೃದ್ದಿಗಾಗಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚಿಸಿದರು.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ತಾಂಡಾಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿರುವ ತಾಂಡಾಗಳ ಮಾಹಿತಿ, ಹಾಗೂ ತಾಂಡಾ ಅಭಿವೃದ್ದಿಗಾಗಿ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಿಕೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚಿಸಿದರು.

      ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಭೆಗೆ ಕಂದಾಯ ಗ್ರಾಮಗಳಿಗೆ ಸೇರಿದ ತಾಂಡಾಗಳ ಬಗ್ಗೆ ಮಾಹಿತಿ ನೀಡಿದರು.
      ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಹೆಸ್ಕಾಂನ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಕೆಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.