ಪ್ರತಿಭಾ ಪುರಸ್ಕಾರ : ಆನ್ ಲೈನ್ ಅರ್ಜಿ
ಇಂಡಿ : ರಾಜ್ಯ ಸರಕಾರಿ ಅಧಿಕಾರಿಗಳ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸರಕಾರಿ ನೌಕರರ ಸಂಘದಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಇಂಡಿ ತಾಲೂಕಾ ಅಧ್ಯಕ್ಷ ಬಸವರಾಜ ರಾಹೂರ ತಿಳಿಸಿದ್ದಾರೆ.
ಸರಕಾರಿ ನೌಕರರ ಸಂಘದ ಸಬಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರಿ ನೌಕರರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ ೯೦ ಕ್ಕಿಂತ ಹೆಚ್ಚಿನ ಅಂಕ ಪಡೆದ ಮಕ್ಕಳು ಅರ್ಜಿ ಸಲ್ಲಿಸಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.
ಮೇ ೩೧ ರಂದು ಕೊನೆಯ ದಿನವಾಗಿದ್ದು ನೌಕರರ ಸಂಘದ ಸಾಮಾಜಿಕ ಜಾಲತಾಣದ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ರಾವೂರ ತಿಳಿಸದರು.
ಇಂಡಿ : ಬಸವರಾಜ ರಾವೂರ