ಡಾ.ಅಂಬೇಡ್ಕರ್ ರಾಜ್ಯ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
ಇಂಡಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಲಕೇರಿ ವಲಯದ ವತಿಯಿಂದ ಕೊಡಮಾಡುವ 2025 ನೇ ಸಾಲಿನ ‘ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ರಾಜ್ಯ ಪ್ರಶಸ್ತಿ’ ಗೆ
ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸಂಚಾಲಕ ಸೋಮಶೇಖರ ಬಡಿಗೇರ ತಿಳಿಸಿದ್ದಾರೆ.
ಏಪ್ರಿಲ್ 19 ಶನಿವಾರ ಸಂಜೆ ತಾಳಿಕೋಟಿ ತಾಲೂಕಿನ ಕಲಕೇರಿಯಲ್ಲಿ ಜರುಗುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಕಲಬುರ್ಗಿಯ ಭಂತೆ ಅಮರ ಜ್ಯೋತಿ, ಪಂಚರಂಗ ಗದ್ದಗಿಮಠದ ಷ ಬ್ರ ಮಡಿವಾಳೇಶ್ವರ ಶಿವಾಚಾರ್ಯರು, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಸಿಂದಗಿ ಶಾಸಕ ಅಶೋಕ ಮನುಗೂಳಿ, ದಲಿತ ಮುಖಂಡ ಚನ್ನಪ್ಪ ಉತಾಳೆ, ಮಾಜಿ ಶಾಸಕ ಶರಣಪ್ಪ ಸುಣಗಾರ, ಮಲ್ಲಿಕಾರ್ಜುನ ಲೋಣಿ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಮಿತಿಯ ಸಂಚಾಲಕ ಸೋಮಶೇಖರ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















