ಗುರುಭೂಷಣ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
ಇಂಡಿ: ಬೆಂಗಳೂರಿನ ಸೂರ್ಯ ಫೌಂಡೇಶನ್(ರಿ) ಹಾಗೂ ಸ್ಪಾರ್ಕ್ ಅಕಾಡೆಮಿ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ‘ಗುರು ಭೂಷಣ’ ಪ್ರಶಸ್ತಿಗೆ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಭಾಜನರಾಗಿದ್ದಾರೆ. ಶೈಕ್ಷಣಿಕ, ಸಾಹಿತ್ಯಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ, ಸಂತೋಷ ಬಂಡೆ ಅವರಿಗೆ ಅಕ್ಟೋಬರ್ 16 ರಂದು ಬೆಂಗಳೂರಿನ ಇಂಡೋಗ್ಲೋಬ್ ಪದವಿಪೂರ್ವ ಕಾಲೇಜಿನಲ್ಲಿ ಜರುಗುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 2024 ನೇ ಸಾಲಿನ ‘ಗುರುಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಸೂರ್ಯ ಫೌಂಡೇಶನ್(ರಿ) ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಸೋಮೇಶ ನವೋದಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















