ಇಂದು ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ
ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಅವರ ವತಿಯಿಂದ ಭಾರತರತ್ನ ಡಾ.ಎಸ್ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಸಪ್ಟೆಂಬರ್ 5 ರಂದು ಬೆಳಿಗ್ಗೆ 10 ಕ್ಕೆ ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿದೆ.
ಕಾತ್ರಾಳ-ಬಾಲಗಾಂವ ಗುರುದೇವಾಶ್ರಮದ ಪರಮಪೂಜ್ಯ ಡಾ.ಅಮೃತಾನಂದ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು.
ಇಂಡಿ ಮತಕ್ಷೇತ್ರದ ಶಾಸಕರು ಹಾಗೂ ಅಂದಾಜುಗಳ ಸಮಿತಿಯ ಅಧ್ಯಕ್ಷರಾದ ಯಶವಂತರಾಯಗೌಡ ಪಾಟೀಲ ಅವರು ಅಧ್ಯಕ್ಷತೆ ವಹಿಸಿ ಸಮಾರಂಭವನ್ನು ಉದ್ಘಾಟಿಸುವರು.ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ ಬಿ ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ,ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ,ವಿಜಯಪುರ ಲೋಕಸಭಾ ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯಸಭೆಯ ಸಂಸದರಾದ ಸುಧಾ ಮೂರ್ತಿ, ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನಿಲಗೌಡ ಪಾಟೀಲ, ಪಿ ಎಚ್ ಪೂಜಾರ, ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನುಗೂಳಿ,ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ,ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಇಂಡಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಜಹಾಂಗೀರ ಸೌದಾಗರ ಅವರು ಅಗಮಿಸುವರು.
ವಿಶೇಷ ಆವ್ಹಾನಿತರಾಗಿ ಇಂಡಿ ಉಪವಿಭಾಗಾಧಿಕಾರಿಗಳು,
ಉಪವಿಭಾಗೀಯ ದಂಡಾಧಿಕಾರಿಗಳಾದ ಅಬೀದ್ ಗದ್ಯಾಳ,
ವಿಜಯಪುರದ ಉಪನಿರ್ದೇಶಕರಾದ ಎನ್ ಎಚ್ ನಾಗೂರ,
ವಿಜಯಪುರದ ಡೈಟ್ ನ ಉಪನಿರ್ದೇಶಕರಾದ ಉಮಾದೇವಿ ಸೊನ್ನದ,ಇಂಡಿ ಪೊಲೀಸ್ ಉಪಾಧೀಕ್ಷಕರಾದ ಜಗದೀಶ ಎಚ್ ಎಸ್, ಇಂಡಿ ತಹಶೀಲ್ದಾರರು ಹಾಗೂ ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಬಿ ಎಸ್ ಕಡಕಭಾವಿ,ಇಂಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ ಅವರು ಆಗಮಿಸುವರು.
ಈ ಸಮಾರಂಭದಲ್ಲಿ ತಾಲೂಕಿನ ಎಲ್ಲ ಶಿಕ್ಷಕ ಸಂಘಗಳ , ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ, ಮಹಿಳಾ ಸಂಘಟನೆಗಳ, ಬೋಧಕೇತರ ಸಂಘಟನೆಯ ಅಧ್ಯಕ್ಷರು ,ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಿಕ್ಷಕರು, ಕಾರ್ಯಾಲಯದ ಸಿಬ್ಬಂದಿಯವರು, ಸಿ ಆರ್ ಪಿ , ಬಿ ಆರ್ ಪಿ , ಇ ಸಿ ಓ , ಬಿಐಆರ್ ಟಿ, ಪಿ ಈ ಓ ರವರು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು , ಅಭಿಮಾನಿಗಳು, ಶಿಕ್ಷಣ ಪ್ರೇಮಿಗಳು, ಪತ್ರಿಕಾ ಮಾಧ್ಯಮದವರು , ಟಿ ವಿ ಮಾಧ್ಯಮದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಇಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಟಿ ಎಸ್ ಆಲಗೂರ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಎಸ್ ಆರ್ ನಡುಗಡ್ಡಿ , ನೋಡಲ್ ಅಧಿಕಾರಿಗಳಾದ ಶ್ರೀ ಎ ಓ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.