ಇಂಡಿ : ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ 5 ಕೆಜಿ ಬೆಳ್ಳಿಯ ಮೂರ್ತಿ ಸೇರಿದಂತೆ ವಿವಿಧ ಬೆಲೆಬಾಳುವ ವಸ್ತುಗಳನ್ನು ಕಳ್ಳತನಗೈದು ಎಸ್ಕೇಪ್ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮಿರಗಿ ಗ್ರಾಮದ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಬೆಳ್ಳಿ ಮೂರ್ತಿಯ ಜೊತೆಗೆ ವಿವಿಧ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.