VOJ ನ್ಯೂಸ್ ಡೆಸ್ಕ್ : ಆಂಧ್ರಪ್ರದೇಶದ ತಿರುಪತಿ ಸಮೀಪ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನು ಬಸ್ ನಲ್ಲಿದ್ದ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ತಿರುಪತಿಯಿಂದ 25 ಕಿಲೋ ಮೀಟರ್ ದೂರದಲ್ಲಿರುವ ಬಕಾರ್ ಪೇಟ್ ನಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ತಿರುಪತಿ ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.