ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದ ಮಾನವನ್ನು…! ಮಾಜಿ ಸಚಿವ ಬಿ ಶ್ರೀ ರಾಮಲು
Desk news : ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದ ಮಾನವನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕಿದೆ.
ನ್ಯಾಯ ಒದಗಿಸಬೇಕಾದ ಪೊಲೀಸರೇ ಯಾರದ್ದೋ ಕುಮ್ಮಕ್ಕಿನಿಂದ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮನಬಂದಂತೆ ಥಳಿಸಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ.
ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ಇಂತಹ ಅಮಾನವೀಯ ಘಟನೆ ನಡೆದಿರಲಿಲ್ಲ. ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಪೊಲೀಸರನ್ನು ಅಮಾನತು ಮಾಡುವ ಬದಲು ಅವರು ನಡೆಸಿರುವ ಹೀನ ಕೃತ್ಯವನ್ನು ಸಮರ್ಪಿಸಿಕೊಂಡಿರುವ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರ ನಡವಳಿಕೆ ಅಕ್ಶಮ್ಯ ಅಪರಾಧ.
ತಕ್ಷಣವೇ ಈ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಿ ಮಹಿಳೆಗೆ ನ್ಯಾಯ ಕೊಡಿಸಬೇಕು ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ.
ಕಾಂಗ್ರೆಸ್ ಪಕ್ಷದ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಒಂದು
ರಾಜಕೀಯ ಪಕ್ಷದ ಮುಖವಾಣಿಯಂತೆ ನಡೆದುಕೊಂಡಿರುವುದನ್ನು ಅಕ್ಷರಶಃ ಸಮರ್ಥನೆ ಮಾಡಿಕೊಳ್ಳಲು ಸಾಧ್ಯವಿಲ್ಲ.
ನೊಂದಿರುವ ಮಹಿಳೆಗೆ ತಕ್ಷಣವೇ ಸೂಕ್ತವಾದ ಚಿಕಿತ್ಸೆ ನೀಡಿ ಅವರು ಹಾಗೂ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲು ಗೃಹ ಇಲಾಖೆಗೆ ಶಿಫಾರಸು ಮಾಡಬೇಕೆಂದು ಒತ್ತಾಯಿಸುತ್ತೇನೆ.
ಒಂದು ಕಡೆ ಶಾಸಕರಿಗೂ ರಕ್ಷಣೆ ಇಲ್ಲ ಮತ್ತೊಂದು ಕಡೆ ಮಹಿಳೆಯರ ಮೇಲು ಹಾಡು ಹಗಲೇ ಹಲ್ಲೆಗಳು ನಡೆಯುತ್ತವೆ. ಕರ್ನಾಟಕದಲ್ಲಿ ಒಂದು ರೀತಿಯ
ಸರ್ವಾಧಿಕಾರಿ ಧೋರಣೆಯ ಆಡಳಿತವಿದ್ದು ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ. ಇದಕ್ಕೆ ಶೀಘ್ರದಲ್ಲಿ ಜನರೇ ಉತ್ತರ ಕೊಡುತ್ತಾರೆ ಕಾದು ನೋಡಿ!
ಬಿ ಶ್ರೀರಾಮಲು ಟ್ವೀಟ್ X ಖಾತೆ


















