ಪೊಲೀಸ್ ಹುತ್ಮಾತರ ದಿನಾಚರಣೆ
ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ :
ನ್ಯಾ. ಶಿವಾಜಿ ನಲವಡೆ
ವಿಜಯಪುರ, ಅಕ್ಟೋಬರ್ 21 : ಒತ್ತಡ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು.
ಸೋಮವಾರ ನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ, ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದ ಅವರು,
ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಬದ್ಧತೆಯಿಂದ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಇಂದು ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಅವರ ಗೌರವರ್ಥವಾಗಿ ಸ್ಮರಿಸಲಾಗುತ್ತಿದೆ. ದೇಶದ ಬದ್ರತೆ ಹಾಗೂ ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ. 1959ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ದುಷ್ಟ ಶಕ್ತಿಗಳ ದಮನಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ ಶಾಂತಿಯಿAದ ಜೀವನ ನಡೆಸಲು ಅವರ ಕಾರ್ಯ ಅನನ್ಯವಾಗಿದೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ , ದೇಶಕ್ಕಾಗಿ ಹೋರಾಡುತ್ತಾ ವೀರ ಮರಣಹೊಂದಿದ್ದ ಪೊಲೀಸರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್‌ನ ಬಾಸಿ ಚೀನಾ ಭಾಗದಲ್ಲಿ ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರರಾದ ಪೊಲೀಸರುಗಳನ್ನು ದೇಶದದ್ಯಂತ ಎಲ್ಲ ಘಟಕಗಳಲ್ಲಿ ಸ್ಮರಿಸಲಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗಣ್ಯರುಗಳಿಂದ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಲಾಯಿತು.