ದಸರಾ ಹಬ್ಬದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಗೃಹ ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ
ವಿಜಯಪುರ: ದಸರಾ ಹಬ್ಬದ ಅಂಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಶುಕ್ರವಾರ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡರು.
ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಬೆಳಿಗ್ಗೆಯಿಂದಲೇ ಸಚಿವರ ಗೃಹ ಕಚೇರಿಗೆ ಆಗಮಿಸಿದ ಅಪಾರ ಸಂಖ್ಯೆಯಲ್ಲಿದ್ದ ರೈತರು, ಮುಖಂಡರು, ಸಾರ್ವಜನಿಕರು, ಯುವಕರು, ಮಹಿಳೆಯರು, ಸಚಿವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬನ್ನಿ ನೀಡಿ ಶುಭ ಕೋರಿದರು. ಇದಕ್ಕೆ ಪ್ರತಿಯಾಗಿ ಸಚಿವರೂ ಸಹ ಬನ್ನಿ ನೀಡಿ ದಸರಾ ಹಬ್ಬದ ಶುಭಾಷಯ ಕೋರಿದರು.
ಈ ಸಂದರ್ಭದಲ್ಲಿ ಸಚಿವರ ಪುತ್ರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಉಪಸ್ಥಿತರಿದ್ದು ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕರ್ನಾಟಕ ಅಷ್ಟೇ ಅಲ್ಲ, ನೆರೆಯ ಮಹಾರಾಷ್ಟ್ರದಿಂದಲೂ ಆಗಮಿಸಿದ್ದ ಸಚಿವರ ಅಭಿಮಾನಿಗಳು, ಹಿತೈಷಿಗಳು ದಸರಾ ಶುಭಾಷಯ ಕೋರಿದರು.
ನಾಡದೇವಿ ಚಾಮುಂಡೇಶ್ವರಿ ನಾಡಿನಾದ್ಯಂತ ಸುಖ, ಸಮೃದ್ಧಿ, ನೆಮ್ಮದಿ ಕುರುಣಿಸಲಿ. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಂತಸಮಯ ಜೀವನ ಸಾಗಿಸುವಂತಾಗಲಿ ಎಂದು ಸಚಿವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
ಗೃಹ ಕಚೇರಿಗೆ ರಾತ್ರಿಯವರೆಗೂ ಆಗಮಿಸಿದ ಸಾರ್ವಜನಿಕರೊಂದಿಗೆ ಸಚಿವ ಎಂ. ಬಿ. ಪಾಟೀಲ ಮತ್ತು ಅವರ ಪುತ್ರ ಬಸನಗೌಡ ಎಂ. ಪಾಟೀಲ ಅವರು ದಸರಾ ಬನ್ನಿ ವಿನಿಮಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಜಯಪುರ ನಗರದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ರುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಾರ್ವಜನಿಕರೊಂದಿಗೆ ದಸರಾ ಅಂಗವಾಗಿ ಬನ್ನಿ ವಿನಿಮಯ ಮಾಡಿಕೊಂಡರು. ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದ ನಾನಾ ಭಾಗಗಳಿಂದ ಆಗಮಿಸಿದ್ದ ಸಚಿವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಹಿತೈಷಿಗಳು ಪರಸ್ಪರ ದಸರಾ ಹಬ್ಬದ ಶುಭಾಷಯ ಕೋರಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಜೀನ್ಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಉಪಸ್ಥಿತರಿದ್ದರು.