ಭಿಕ್ಷೆಯಿಂದ ಬಂದ ಹಣ ಸಿಎಂ ಖಾತೆಗೆ ಜಮಾ..ಕಾರಣ ಗೊತ್ತಾ..?
ಇಂಡಿ : ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ನಿರ್ಧಾರ ಖಂಡಿಸಿ ನಗರದಲ್ಲಿ ಎಬಿವಿಪಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯದ ಉಳಿವಿಗಾಗಿ ಭಿಕ್ಷಾಟನೆ ಮಾಡಿದ ಹಣವನ್ನು ಬುಧವಾರ ಮುಖ್ಯಮಂತ್ರಿಗಳ ಖಾತೆಗೆ ಜಮಾ ಮಾಡಲಾಯಿತು.
ಪಟ್ಟಣದ ತಾಲ್ಲೂಕು ಸರಕಾರಿ ಬಸ್ ನಿಲ್ದಾಣ ಹಾಗೂ ಪ್ರಮುಖ ಬಿದಿಗಳಲ್ಲಿ ಎಬಿವಿಪಿ ಕಾರ್ಯಕರ್ತರು ಭಿಕ್ಷಾಟನೆ ನಡೆಸಿ ಸುಮಾರು1312 ರೂಪಾಯಿ ಸಂಗ್ರಹಿಸಿ ಮುಖ್ಯ ಮಂತ್ರಿ ಖಾತೆಗೆ ಜಮಾ ಮಾಡಿದ್ದಾರೆ. ಈ ಸಂದರ್ಭದಲ್ಲಿ
ಎಬಿವಿಪಿ ಪದಾಧಿಕಾರಿ ಸಚಿನ್ ದಾನಗೊಂಡ ಪ್ರಾಂತ ಕಾರ್ಯಕಾರಣಿ ಸದಸ್ಯ ಮಾತನಾಡಿ, ಸಾಮಾನ್ಯವಾಗಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯ ಇರಬೇಕು ಎಂಬುದು ಆದರ್ಶ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳು ಸಂಖ್ಯೆಗೆ ಹೋಲಿಕೆ ಮಾಡಿದರೆ ಸದ್ಯದ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ ಅಂಕಪಟ್ಟಿ ಪ್ರಮಾಣಪತ್ರ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು 200 ಕಿಮೀ ವಿದ್ಯಾರ್ಥಿಗಳು ಪ್ರಯಾಣ ಮಾಡಬೇಕು. ಇಂತಹ ಸಮಸ್ಯೆಗೆ ಪರಿಹಾರ ಕಲ್ಪಿಸಿರುವ ಹೊಸ ವಿವಿಗಳನ್ನು ಉಳಿಸಿಕೊಳ್ಳಬೇಕು. ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿವಿಗಳನ್ನು ಅಭಿವೃದ್ಧಿಪಡಿಸಬೇಕು ವಿನಾ ಅತಂತ್ರ ಗೊಳಿಸಬಾರದು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವ ರಾಜ್ಯ ಸರ್ಕಾರ ಎರಡು ವರ್ಷ ಕಳೆದರೂ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಸ್ವಲ್ಪವೂ ಕೂಡ ಗಮನ ನೀಡದೆ, ಸದ್ಯ ಮೂಲ ಸೌಲಭ್ಯಗಳ ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.
ರಾಜ್ಯ ಸರ್ಕಾರ ಕೂಡಲೇ ವಿವಿಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ಅವುಗಳಿಗೆ ಮೂಲ ಸೌಲಭ್ಯಕ್ಕೆ ಅನುದಾನ ನೀಡುವ ಜತೆಗೆ ಉನ್ನತೀಕರಣಗೊಳಿಸಬೇಕು. ಇಲ್ಲದಿದ್ದರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ವಿದ್ಯಾರ್ಥಿಗಳಿಂದ ಭಿಕ್ಷಾಟನೆ ಮಾಡಿ ವಿವಿಗಳನ್ನು ನಡೆಸುತ್ತದೆ ಎಂದರು. ಕಾರ್ಯಕರ್ತರಾದ ರಾಹುಲ್ ಜಾದವ್
ಸೋಮನಾಥ್ ಕಾಟಿಗೆರ್ , ಹುಸೇನಿ ಮುಲ್ಲಾ, ಆದರ್ಶ್ ಸೇರಿದಂತೆ ಮತ್ತಿತರರಿದ್ದರು.