ವಿಜಯಪುರ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಎತ್ತುಗಳು ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮಣಂಕಲಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ದ್ಯಾಮಗೊಂಡ ಲಕ್ಷ್ಮಣ ಏಳಗಿ ಎಂಬುವರಿಗೆ ಸೇರಿದ ಸಾವಿರಾರು ಮೌಲ್ಯದ ಎತ್ತುಗಳು ಸಾವಾಗಿವೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.