ವಿಜಯಪುರ: ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಗಾದಿ ಅಂಗಡಿ ಬೆಂಕಿಗಾಹುತಿ ಆಗಿರುವ ಘಟನೆ ವಿಜಯಪುರ ನಗರದ ಶಿವಾಜಿ ಸರ್ಕಲ್ ಬಳಿ ನಡೆದಿದೆ. ನದಾಫ್ ಎಂಬುವರಿಗೆ ಸೇರಿದ ಗಾದಿ ಅಂಗಡಿ ಭಸ್ಮವಾಗಿದೆ.
ಗಾದಿ ಅಂಗಡಿ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಗಾದಿ ಸುಟ್ಟ ಭಸ್ಮವಾಗಿವೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.