ಸಚಿವ ಎಂ.ಬಿ.ಪಾಟೀಲ ಅವರಿಂದ ಪಂಚಗ್ಯಾರಂಟಿ ಯೋಜನೆಗಳ ಯಶೋಗಾಥೆ ಕಿರುಪುಸ್ತಕ ಬಿಡುಗಡೆ
ವಿಜಯಪುರ ಜೂ.01 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದಿರುವ ಪಂಚ ನದಿಗಳ ಬೀಡಿನಲ್ಲಿ ಪಂಚ ಗ್ಯಾರಂಟಿ ಯಶೋಗಾಥೆ ಕಿರುಪುಸ್ತಕವನ್ನು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರವಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶರಣರು ನಡೆದಾಡಿದ ಪಾವನ ಭೂಮಿ ವಿಜಯಪುರ. ಪಂಚ ನದಿಗಳ ನಾಡು, ಕರ್ನಾಟಕದ ಪಂಜಾಬ್ ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಗೆ ಪಂಚ ಗ್ಯಾರಂಟಿಗಳು ಬಲ ತುಂಬಿವೆ. ಅನೇಕರ ಬದುಕಿನಲ್ಲಿ ಸಂತಸದ ಅಲೆ ಮೂಡಿಸುವಲ್ಲಿ ಯಶಸ್ವಿಯಾಗಿವೆ. ಪ್ರತಿ ಯೋಜನೆಗಳು ಫಲಾನುಭವಿಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿವೆ. ಪಂಚ ಗ್ಯಾರಂಟಿಗಳ ಫಲಶೃತಿಗಳ ನಿದರ್ಶನಗಳು ವಿಜಯಪುರದ ಮೂಲೆ ಮೂಲೆಗಳಲ್ಲೂ ಗೋಚರಿಸುತ್ತಿರುವುದು ರಾಜ್ಯ ಸರ್ಕಾರದ ಬದ್ಧತೆಗೆ ಹಿಡಿದ ಕೈಗನ್ನಡಿ. ಒಂದೊಂದು ಗ್ಯಾರಂಟಿಯೂ ಒಬ್ಬೊಬ್ಬರ ಬದುಕಿನಲ್ಲಿ ಹೊಸ ಆಶಾಭಾವವನ್ನು ಬಿತ್ತರಿಸಿದೆ ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ, ಆರ್ಥಿಕ ಸಬಲತೆಯ ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್, ಯುವಜನರಿಗೆ ಪ್ರೋತ್ಸಾಹಿಸಲು ಯುವಶಕ್ತಿ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ ಸೇರಿದಂತೆ ಜನರಿಗೆ ಬೇಕಾಗುವ ಎಲ್ಲ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ 5 ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಸುಸ್ಥಿರಗೊಳಿಸುವ ಸದುದ್ಧೇಶದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಸರ್ವರ ಬದುಕಿನಲ್ಲಿ ನೆಮ್ಮದಿ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಸರ್ಕಾರ ಜನರಿಗಾಗಿ ಜಾರಿಗೊಳಿಸಿರುವ ಜನಪರ ಯೋಜನೆಗಳ ಮಾಹಿತಿ, ಯೋಜನೆಯಿಂದ ಜನರ ಬದುಕಿನಲ್ಲಿ ಆದ ಬದˉÁವಣೆಯ ಕುರಿತ ಕಿರುಪುಸ್ತಕವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇˉÁಖೆಯಿಂದ ಹೊರತರಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕರಾದ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್‍ಕುಮಾರ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.



















