ಸಂಗೀತ ಲೋಕದ ರಿದಂ ಕಿಂಗ್ ಬಾಲಿ ನಿಧನ..!
Voice of Janata DesK NEWS : ಹಿರಿಯ ತಾಳವಾದ್ಯ ಕಲಾವಿದ, ಸಂಗೀತ ನಿರ್ದೇಶಕ, ಆಯೋಜಕ ಎಸ್. ಬಾಲಸುಬ್ರಹ್ಮಣ್ಯಂ ಅವರು ಗುರುವಾರ ಕೊನೆಯುಸಿರು ಎಳೆದಿದ್ದಾರೆ.
ಬಹುವಾದ ಪರಿಣಿತ ರಾಗಿದ್ದ 71 ವರ್ಷದ ಅಲ್ಪಕಾಲಿಕ ಅವರು ರೋಗ್ಯದಿಂದ ಬಳಲು ತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಅಲ್ಪಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃದಂಗ, ತಬಲಾ, ಡೋಲಕ್, ಡೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ರಿದಂ ಕಿಂಗ್ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲಿಯೂ ಸಿ. ಅಶ್ವತ್ವ, ಮೈಸೂರು ಅನಂತಸ್ವಾಮಿ ಸೇರಿದಂತೆ ಅನೇಕ ಹಿರಿಯರೊಂದಿಗೆ ಕೆಲಸ ಮಾಡಿದ್ದರು. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಗಳಿಸಿದ್ದರು.
ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಭಾಗಿಯಾಗಿದ್ದಾರೆ.
ಬಾಲಿಯವರು ಶಾಸ್ತ್ರೀಯವಾಗಿ ಕಲಿತದ್ದು ಮೃದಂಗ ಮಾತ್ರ. ಆದರೆ ತಮ್ಮ ಶ್ರದ್ದೆಯಲ್ಲೇ ತಬಲ, ಧೋಲಕ್, ಧೋಲ್ಕಿ, ಬೋಲ್, ಖಂಜರ ಮುಂತಾದ ಹಲವಾರು ವಾದ್ಯಗಳನ್ನು ನುಡಿಸುವ ಪರಿಣತಿಯನ್ನು ಸಾಧಿಸಿದರು. ಹೆಸರಾಂತ ಗಾಯಕರುಗಳಾದ ಬಾಳಪ್ಪ ಹುಕ್ಕೇರಿ, ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಶ್ಯಾಮಲಭಾವೆ, ಸಿ ಅಶ್ವತ್, ರತ್ನಮಾಲಾ ಪ್ರಕಾಶ್, ಮಾಲತಿ ಶರ್ಮ ಮುಂತಾದವರ ಕಾರ್ಯಕ್ರಮಗಳಲ್ಲಿ ಬಾಲಿ ಸಾಥ್ ನೀಡಿದ್ದಾರೆ.
ನಾನಾ ಗಣ್ಯರ ಸಂತಾಪ
ಚಲನಚಿತ್ರ, ನೃತ್ಯ, ನಾಟಕ, ಕಿರುತೆರೆ, ಧ್ವನಿಮುದ್ರಣ ಕಾರ್ಯಗಳಲ್ಲಿ ಖ್ಯಾತ ಸಂಗೀತಗಾರರಾದ ಜಿ.ಕೆ. ವೆಂಕಟೇಶ್, ವಿಜಯಭಾಸ್ಕರ್, ಎಂ. ರಂಗರಾವ್, ರಾಜನ್-ನಾಗೇಂದ್ರ, ಟಿ.ಜಿ. ಲಿಂಗಪ್ಪ, ಅನಂತಸ್ವಾಮಿ, ಅಶ್ವತ್-ವೈದಿ ಮುಂತಾದವರ ಸಂಗೀತ ಸಂಯೋಜನೆಗಳಿಗೆ ಬಾಲಿ ಅವರ ಲಯ ಸಂಯೋಜನೆ ಮಾಡಿದ್ದಾರೆ. ಬಾಲಿ ಅವರ ನಿಧನಕ್ಕೆ ಸಂಗೀತ ಕ್ಷೇತ್ರದ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದು, ಶುಕ್ರವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.