• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ – ರಮೇಶ ಜಿಗಜಿಣಗಿ

      Voiceofjanata.in

      September 6, 2025
      0
      ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ – ರಮೇಶ ಜಿಗಜಿಣಗಿ
      0
      SHARES
      77
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಕರ ದಿನಾಚರಣೆ: ಜಿಲ್ಲಾ ಆತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

      ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ – ರಮೇಶ ಜಿಗಜಿಣಗಿ

      ವಿಜಯಪುರ, ಸೆಪ್ಟಂಬರ್ 5 :ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

      ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾಗಿ ಪಾಠ ಬೊಧನೆ ಮಾಡುವ ಮೂಲಕ ಮುಂದಿನ ಉತ್ತಮ ನಾಗರಿಕರನ್ನಾಗಿ ರೂಪಿಸುವ ಬಹು ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಕಲ್ಲಿನ ಮೂರ್ತಿಯನ್ನು ಶಿಲೆಯನ್ನಾಗಿಸುವಂತೆ ಅಮೂರ್ತ ರೂಪದ ಮಕ್ಕಳನ್ನು ಮೂರ್ತರೂಪ ಕೊಡುವ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳ ಅಂತರಾಳವನ್ನು ಅರಿತು, ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಮಕ್ಕಳು ಸುಂದರ ವ್ಯಕ್ತಿತ್ವ ರೂಪಿಸಿಕೊಳ್ಳುವ ಜವಾಬ್ದಾರಿ ನಿಭಾಯಿಸುವ ಶಿಕ್ಷಕರ ಸ್ಥಾನ ಗೌರವಕ್ಕೆ ಭಾಜನವಾಗಿದ್ದು, ಶಿಕ್ಷಕ ಓರ್ವ ವ್ಯಕ್ತಿ ಅಲ್ಲ ಅದೊಂದು ಶಕ್ತಿಯಾಗಿದ್ದು, ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

      ನಾಗಠಾಣ ಶಾಸಕ ವಿಠಲ ಕಟಕಧೋಂಡ ಅವರು ಮಾತನಾಡಿ, ಜ್ಞಾನದ ದೀವಿಗೆ ಬೆಳಗುವ ಶಿಕ್ಷಕ ಜ್ಞಾನಯೋಗಿ, ದಾರ್ಶನಿಕ, ಶಿಕ್ಷಕ, ಲೇಖಕ ಮತ್ತು ರಾಜಕಾರಣಿಯಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ನೀಡಿದ ಕೊಡುಗೆ ಅಪಾರವಾಗಿದೆ. ವ್ಯಕ್ತಿಯ ಜೀವನ ಹಾಗೂ ಭವ್ಯ ಭವಿತವ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿಷ್ಠೆಯ ಪರಿಪಾಲನೆಯೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಪಾಠ ಬೋಧನೆ ಮಾಡಿ, ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕು. ತಂದೆ ತಾಯಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ, ಶಿಕ್ಷಕ ಶಿಕ್ಷಣದ ಮೂಲಕ ನೀರೆರೆದು ಪೋಷಿಸಿ ಅವರ ಸರ್ವಾಂಗೀಣ ವ್ಯಕ್ತಿತ್ವ ನಿರ್ಮಾಣಕ್ಕಾಗಿ ಶ್ರಮಿಸುವ ಸಾಕಾರಮೂರ್ತಿಯಾಗಿದ್ದಾರೆ ಎಂದರು. ನೈತಿಕ ಮೌಲ್ಯಗಳನ್ನು ತಿಳಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಈ ಸಮಾಜದ ರಕ್ಷಣೆ ಮಾಡುವ ಕಾರ್ಯ ನಿರ್ವಹಿಸುವ ಶಿಕ್ಷಕರದ್ದು ಅನುಪಮ ಕಾರ್ಯವಾಗಿದೆ. ಸದೃಢ ಹಾಗೂ ಸಶಕ್ತ ರಾಷ್ಟç ನಿರ್ಮಾಣದಲ್ಲಿ ಶಿಕ್ಷಕರ ಕಾರ್ಯ ಮಹತ್ವದ್ದಾಗಿದೆ. ಪ್ರಾಥಮಿಕ ಹಂತದಿAದಲೇ ಮಕ್ಕಳಿಗೆ ಸುಭದ್ರ ಶಿಕ್ಷಣ ನೀಡುವ ಮೂಲಕ ಮಾದರಿ ಹಾಗೂ ಶ್ರೇಷ್ಠ ವ್ಯಕ್ತಿಗಳನ್ನಾಗಿ ನಿರ್ಮಾಣ ಮಾಡಿ ಆದರ್ಶ ಶಿಕ್ಷಕರಾಗಿ ಎಂದು ಹೇಳಿದರು.ಸರ್ಕಾರ ಶಿಕ್ಷಣ ಕ್ಷೇತ್ರಕ್ಕಾಗಿ ಸಾಕಷ್ಟು ಅನುದಾನ ಮೀಸಲಿರಿಸಿ, ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಉತ್ತಮ ಶಿಕ್ಷಣ ಪಡೆದುಕೊಳ್ಳಲು ಇದರಿಂದ ಮಕ್ಕಳಿಗೆ ಅನುಕೂಲ ಒದಗಿಸಿದೆ. ಮಕ್ಳಳನ್ನು ಸತ್ಪçಜೆಯಾಗಿ ರೂಪುಗೊಳ್ಳಲು ಶಿಕ್ಷಕ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು. ವೃತ್ತಿ ಗೌರವ, ಸೇವಾ ಮನೋಭಾವನೆಯೊಂದಿಗೆ ತಾಯಿಯ ಕರುಣೆ ಹೊಂದಿ, ಮಾದರಿ ಶಿಕ್ಷಕರಾಗಿ ಮಕ್ಕಳ ಭವಿಷ್ಯವನ್ನು ಉತ್ತಮಪಡಿಸಬೇಕು ಎಂದ ಅವರು, ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಸುಧಾರಣೆಗೆ ಶ್ರಮಿಸುವಂತೆ ಹೇಳಿದರು.

      ಧಾರವಾಡ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ,ಇದು ಶಿಕ್ಷಕರಿಗೆ ಮಹತ್ವದ ದಿನವಾಗಿದೆ. ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕಟಿಬದ್ಧರಾಗಿ ಶ್ರಮಿಸಿ,ಗುರುವಿನ ಸ್ಥಾನ ಬಹುದೊಡ್ಡದು, ಮಕ್ಕಳ ಬದುಕನ್ನು ಬಂಗಾರವಾಗಿಸುವ ಕಾರ್ಯ ಮಾಡಿ ಮಕ್ಕಳ ಸರ್ವೊತೋಮುಖ ಏಳಿಗೆಗಾಗಿ ಶ್ರಮಿಸಿ ಎಂದು ಹೇಳಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ದೇಶದ ಭವಿಷ್ಯ ಮಕ್ಕಳಾಗಿದ್ದಾರೆ. ಅಂತಹ ಮಕ್ಕಳ ಭವ್ಯ ಭವಿಷ್ಯವನ್ನು ರೂಪಿಸಿ ಸುಭದ್ರ ದೇಶ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಶಿಕ್ಷಕರು ತತ್ವಜ್ಞಾನಿಯಾಗಿ ಮಾರ್ಗದರ್ಶಕರಾಗಿ ಅವರ ಸುಂದರ ಕನಸಿಗೆ ಪ್ರೇರಣಾದಾಯಕವಾಗಿ ಪ್ರೋತ್ಸಾಹಿಸಬೇಕು. ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಆಸ್ಥೆ ವಹಿಸಿ, ನಿಯಮಿತವಾಗಿ ವೇಳಾಪಟ್ಟಿ ಹಮ್ಮಿಕೊಂಡು ಮಕ್ಕಳ ಸರ್ವೋತೋಮುಖ ವ್ಯಕ್ತಿತ್ವದ ಬೆಳವಣಿಗೆಗೆ ಜವಾಬ್ದಾರಿಯುತವಾಗಿ ಹಾಗೂ ಅತ್ಯಂತ ಕಾಳಜಿ ಪೂರ್ವಕವಾಗಿ ಇನ್ನೂ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಮಕ್ಕಳಿಗೆ ನಿರಂತರ ಪರಿಹಾರ ಬೋಧನೆ ಮಾಡಬೇಕು. ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬಿ, ಜಿಲ್ಲೆಯ ಶೈಕ್ಷಣಿಕ ಫಲಿತಾಂಶ ಹೆಚ್ಚಿಸುವಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

      ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಶಿಕ್ಷಕ ಓರ್ವ ತತ್ವಜ್ಞಾನಿಯಾಗಿ, ನಿರಂತರ ಅಧ್ಯಯನಶೀಲತೆಯನ್ನು ರೂಢಿಸಿಕೊಂಡು, ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ ಸಮಾಜ ಸ್ಮರಿಸುವ ಕಾರ್ಯ ನಿರ್ವಹಿಸಬೇಕು. ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಶಿಕ್ಷಣ ಗುಣಮಟ್ಟ ಹೆಚ್ಚಿಸುವಲ್ಲಿ ವಿವಿಧ ಶೈಕ್ಷಣಿಕಾ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.

      ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರಿಗೆ ಪ್ರಶಸ್ತಿ ಪ್ರದಾನ

      2025-26ನೇ ಸಾಲಿನ ವಿಜಯಪುರ ಜಿಲ್ಲೆಯ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

      *ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ* ಇಂಡಿ ಆಶ್ರಯ ಕಾಲನಿ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರೀಮತಿ ಎ.ಎ ಜಮಾದಾರ, ಸಿಂದಗಿ ತಾಲೂಕಿನ ಗಣಿಹಾರ ಎಲ್.ಟಿ ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಗುರಣ್ಣ ಸಿ ಬಿರಾದಾರ,ವಿಜಯಪುರ ನಗರದ ತಾಜಬಾವಡಿಯ ಸರಕಾರಿ ಉರ್ದು ಗಂಡು ಮಕ್ಕಳ ಶಾಲೆ ನಂ 7ರ ಸಹ ಶಿಕ್ಷಕರಾದ ಶ್ರೀಮತಿ ಡಿ.ಎನ್ ಕುರೇಶಿ,ಚಡಚಣ ತಾಲೂಕಿನ ಚಡಚಣ ಮರಡಿಯ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರೀಮತಿ ತಬ್ಬಸ್ಸುಂಬೇಗA ಮೈನುದ್ದೀನಸಾಹೇಬ ಸೌದಿ, ಮುದ್ದೆಬಿಹಾಳ ತಾಲೂಕಿನ ಹುಲಗಬಾಳ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರೀಮತಿ ಎಸ್.ಬಿ ಗೊಂಗಡಿ,ಬಸವನ ಬಾಗೇವಾಡಿ ತಾಲೂಕಿನ ಕರಭಂಟನಾಳ ಬಡಾವಣೆಯ (ತಾಂಡಾ)ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ರಾಚಪ್ಪ ವಪ್ಪಾರಿ ಹಾಗೂ ವಿಜಯಪುರ ಗ್ರಾಮೀಣದ ಟಕ್ಕಳಕಿ ರಾವಜಿವಸ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ರಾಜೇಶ ಪಾಟೀಲ ಅವರನ್ನು ಗೌರವಿಸಲಾಯಿತು.

      *ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ* ಚಡಚಡಣ ತಾಲೂಕು ವಲಯದ ಗುಂದವಾನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸಿದರಾಯ ಎಸ್ ಆಕಳವಾಡಿ, ವಿಜಯಪುರ ನಗರದ ಅಫಜಲಪುರ ಟಕ್ಕೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮ ಶಾಲೆ ನಂ.49ರ ಸಹ ಶಿಕ್ಷಕರಾದ ಚಂದ್ರಕಾAತ ಭಿಮಶಾ ಕನಸೆ,ಮುದ್ದೆಬಿಹಾಳದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಫರೀದಾ ಎಸ್ ಬಾಗವಾನ,ಇಂಡಿ ತಾಲೂಕಿನ ಗಣವಲಗಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಅಕ್ಬರ್ ಎಸ್ ಬಡಿಗೇರ,ಸಿಂದಗಿ ತಾಲೂಕಿನ ದೇವೂರ ಎಲ್.ಟಿ 1ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪರಶುರಾಮ ಮಲ್ಲಪ್ಪ ಬೆನಕನಹಳ್ಳಿ,ವಿಜಯಪುರ ಗ್ರಾಮೀಣದ ಜಂಬಗಿ(ಆ)ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರಾಜಕುಮಾರ್ ಮ ಮಾಳಿ,ಬಸವನ ಬಾಗೇವಾಡಿ ತಾಲೂಕಿನ ಗೊಳಸಂಗಿ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಭಾರತಿ ವಿ ಗೊಂಗಡಿ ಅವರನ್ನು ಗೌರವಿಸಲಾಯಿತು.

      *ಫ್ರೌಢಶಾಲಾ ವಿಭಾಗದಲ್ಲಿ* ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಇಂಡಿ ತಾಲೂಕಿನ ಹಳಗುಣಕಿ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕ ಸಂಗಮೇಶ ಶಿ ಬಂಡೆ, ಸಿಂದಗಿ ತಾಲೂಕಿನ ರಾಂಪೂರ ಪಿ.ಎ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಸಂತೋಷ ಮ.ಜೇವರ್ಗಿ, ಚಡಚಣದ ಶ್ರೀ ಸಂಗಮೇಶ್ವರ ಬಾಲಕಿಯರ ಪ್ರೌಢ ಶಾಲೆಯ ಹಿರಿಯ ಶಿಕ್ಷಕರಾದ ರಾಜೇಶ ಮಲ್ಲಪ್ಪ ಭಂಡಿ, ವಿಜಯಪುರ ನಗರದ ಶ್ರೀ ಸಿದ್ದೇಶ್ವರ ಪ್ರೌಢ ಶಾಲೆ ‘ಬಿ’ ದೈಹಿಕ ಶಿಕ್ಷಕರಾದ ಕೃಷ್ಣಪ್ಪ ಬ.ಗಾಡಿವಡ್ಡರ, ವಿಜಯಪುರ ನಗರದ ಶ್ರೀ ಬಸವೇಶ್ವರ ಪ್ರೌಢಶಾಲೆಯ ಸಹ ಶಿಕ್ಷಕರಾದ ಎಸ್.ಬಿ ಅವಟಿ, ವಿಜಯಪುರ ಗ್ರಾಮೀಣದ ಟಕ್ಕಳಕಿ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕರಾದ ಭೀಮಗೊಂಡ ಬ.ಕೋಟ್ಯಾಳ ಹಾಗೂ ಮುದ್ದೇಬಿಹಾಳ ತಾಲೂಕಿನ ಕೋಳೂರ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಪ್ರಭುಗೌಡ ರಾರಡ್ಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

      ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಲ್ಯಾಪಟಾಪ್ ನೀಡಿ ಸನ್ಮಾನಿಸಲಾಯಿತು.

      ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಸೇಡಶ್ಯಾಳ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ವಿ.ಸಾಲಿಮಠ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರಾದ ಶ್ರೀಮತಿ ಉಮಾದೇವಿ ಸೊನ್ನದ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ,ವಿಜಯಪುರ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆ ಬಿರಾದಾರ, ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ ,ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ, ಭಾರತ ಸೇವಾದಳ,ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸಿದ ಶಿಕ್ಷಕರು, ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#The role of teachers with respect in society is significant - Ramesh Jigajinagi#Today News#Voice Of Janata#Voiceofjanata.in#ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ - ರಮೇಶ ಜಿಗಜಿಣಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.