ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು
ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು
ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.
ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ.
ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.
ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ. ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.