ಲಿಂಗಸೂಗೂರು: ಸುಡು ಬಿಸಿಲಿನ ಬೇಗೆಯನ್ನು ತಪ್ಪಿಸಿಕೊಳ್ಳಲು ನಾಲ್ಕು ಜನ ಯುವಕರು ಈಜಲು ನೀರಿಗಿಳಿದ್ದರು. ಆದರೆ ನೀರಿನ ಸುಳಿಗೆ ಸಿಲುಕಿ ಇಬ್ಬರು ಯುವಕರು ನೀರು ಪಾಲಾದ ಘಟನೆ ನಡೆದಿದೆ.
ಕೃಷ್ಣಾ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು
ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಟಣಮಕಲ್ ನಲ್ಲಿ ನಡೆದಿದೆ. ಈಜಲು ತೆರಳಿದ್ದ ಸಂತೋಷ ಹಾಗೂ ಅನಿಲ್ ಕುಮಾರ್ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಐವರು ಸ್ನೇಹಿತರೊಂದಿಗೆ ಯುವಕರು ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸುಳಿಗೆ ಸಿಲುಕಿದ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ನೇಹಿತರು ಇವರನ್ನು ಕಾಪಾಡಲು ಸಾಕಷ್ಟು ಪ್ರಯತ್ನ ಪಟ್ಟರು ಸಾಧ್ಯವಾಗಿಲ್ಲ. ಇನ್ನೂ ಸಂತೋಷ್ ಎಂಬಾತನ
ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವ ಯುವಕ
ಅನಿಲ್ ಕುಮಾರ್ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.