ತಿಕೋಟಾ : ಮೂರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ತೊರವಿ ತಾಂಡಾ 1 ರ ತೋಟದಲ್ಲಿ ನಡೆದಿದೆ. ಅನಿತಾ ಪಿಂಟು ಜಾಧವ್ (27), ಪ್ರವೀಣ (6) ಸುದೀಪ (4) ಮಮದಿಕಾ (2) ಎಂಬ ಮೂರು ಮಕ್ಕಳನ್ನು ಕೃಷಿ ಹೊಂಡದಲ್ಲಿ ಎಸೆದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಘಟನೆಗೆ ಕೌಟುಂಬಿಕ ಕಲಹವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.