ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಸಂಘದ ವಲಯ ಅಧ್ಯಕ್ಷ ಹಾಗೂ ಬಸವನ ಬಾಗೇವಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್ .ಬಿ.ಹೊಸಮನಿ ಅವರನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯಗಳ ಅಧಿನಿಯಮದ ಅನ್ವಯವಾಗಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ ಅವರು ಈ ವಿಷಯವನ್ನು ಪ್ರಕಟಿಸಿದ್ದು, ಅನುಮೋದನೆ ದಿನಾಂಕದಿಂದ ಎರಡು ವರ್ಷಗಳವರೆಗೆ ಪರಿಷತ್ತಿನ ಪ್ರಾಧಿಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.