ಮುದ್ದೇಬಿಹಾಳ:ಪಟ್ಟಣದ ಹಸಿರು ತೋರಣ ಗೆಳೆಯರ ಬಳಗವು, ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತೀ ವರ್ಷ ಕೊಡ ಮಾಡುವ ” ಪರಿಸರ ರಕ್ಷಕ” ಪ್ರಶಸ್ತಿ ಗೆ ಶರಣಪ್ಪ ಸಾಯಬಣ್ಣ ನಾಗಾವಿ (ಸಾಮಾಜಿಕ ಅರಣ್ಯ), ಅನಿಲಕುಮಾರ ಶಂಕ್ರಪ್ಪ ಚಲವಾದಿ (ಪ್ರಾದೇಶಿಕ ಅರಣ್ಯ), ಶರಣಬಸಪ್ಪ ಹಣಮಪ್ಪ ನೆಲವಾಸಿ, (ಕೆಬಿಜೆಎನ್ ಎಲ್ ಅರಣ್ಯ ವಿಭಾಗ) ಸಿದ್ದನಗೌಡ ಲಿಂಗದಳ್ಳಿ ಶಿಕ್ಷಕರು ಬಿದರಕುಂದಿ (ಸಾಮಾನ್ಯ ವಿಭಾಗ) ಇವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ಜೂನ್ 5, ಗುರುವಾರ ಬೆಳಿಗ್ಗೆ 7.30 ಗಂಟೆಗೆ ಪಟ್ಟಣದ ಕೆ.ಎಚ್.ಬಿ.ಬಡಾವಣೆಯಲ್ಲಿ ಇರುವ ಹಸಿರು ತೋರಣ ಉದ್ಯಾನವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಬಲರಾಮ ಕಟ್ಟಿಮನಿ, ತಾಲ್ಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ್ ಅಲಕುಡೆ, ತಾಲ್ಲೂಕು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಿ.ಐ.ಬಿರಾದಾರ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್.ಸಾವಳಗಿ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಮುಖ್ಯಾಧಿಕಾರಿ ಎಂ.ಎ.ಬಿರಾದಾರ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ ಪಾಲ್ಗೊಳ್ಳುವರು. ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸುವಂತೆ ಹಸಿರು ತೋರಣ ಗೆಳೆಯರ ಬಳಗದ ಕಾರ್ಯದರ್ಶಿ ಅಮರೇಶ ಕೆ.ಗೂಳಿ ಪ್ರಕಟಣೆಯಲ್ಲಿ ಕೋರಿದ್ದಾರೆ.