ರೈತರಿಗೆ ತ್ರೀ ಫೇಸ್ ವಿದ್ಯುತ್ ಸಿಗದರ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ..!
Voice Of Janata DesK News :
ಬೆಳಗಾವಿ ಅಧಿವೇಶನ :ಪ್ರಸ್ತುತ ರಾಜ್ಯದ ರೈತರು ಬರದಿಂದ ತತ್ತರಿಸಿದ್ದಾರೆ. ನೀರಾವರಿ ಆಶ್ರಿತ ಬೆಳೆಗಳಿಗೆ ನೀರು ಹಾಯಿಸಲು ವಿದ್ಯುತ್ ಕೊರತೆ ಇದೆ. ಸರ್ಕಾರದ ಮಂತ್ರಿಗಳು ದಿನಕ್ಕೆ 7 ತಾಸು ಕರೆಂಟ್ ನೀಡುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆಂದು ಬಿಜೆಪಿ ಸದಸ್ಯರು ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಸ್ತುತ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸರ್ಕಾರದ ಆದೇಶದಂತೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಅವಶ್ಯಕತೆಗೆ ತಕ್ಕಂತೆ ಹಗಲಿನಲ್ಲಿ 4 ಗಂಟೆ ಹಾಗೂ ರಾತ್ರಿ 3 ಗಂಟೆ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು. ಪರಿಷತ್‌ನಲ್ಲಿ ಛಲವಾದಿ ನಾರಾಯಣಸ್ವಾಮಿ ಮಾಡಿದ ಪ್ರಶ್ನೆಗೆ ಅವರು ಉತ್ತರಿಸಿದರು.