ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಹತರಾದ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರು ಜಮ್ಮು ಕಾಶ್ಮೀರ ಮೂಲದವರಾಗಿದ್ದಾರೆ ಎಂದು ಐಜಿಪಿ ವಿಜಯ ಕುಮಾರ್ ತಿಳಿಸಿದ್ದಾರೆ. ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ. ಶೋಧ ಕಾರ್ಯ ಮುಂದುವರಿದಿದೆ.