ಲಿಂಗಸೂಗೂರು: ಮಾಜಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷರಾದ ಮಾನಪ್ಪ ವಜ್ಜಲ್ ಹಾಗೂ ಪತ್ರಕರ್ತ ಕ್ಷೇಮಾಭಿವೃದ್ಧಿ ಸಂಘದ ಸಹ ಯೋಗದೊಂದಿಗೆ ಪಟ್ಟಣದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ರಕ್ಷಾಸಮಿತಿ ನಾಮನಿರ್ದೇಶಿತ ಸದಸ್ಯರಾದ ಜ್ಯೋತಿ ಸುಕಂದ ಅವರು ಭೇಟಿ ನೀಡಿ ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ನೀಡಿದರು. ಈ ಸಂದರ್ಭದಲ್ಲಿ ಆಶ್ರಯ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಶೋಭಾ ಕಾಟವಾ ಕೆಡಿಪಿ ನಾಮನಿರ್ದೇಶಿತ ಸದಸ್ಯ ರಾದ ಸ್ಮೀತಾ ಅಂಗಡಿ ಉಪಸ್ಥಿತರಿದ್ದರು.