ಇಂಡಿ: ಅನುಮಾಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಹಿರಸಂಗ ರಸ್ತೆಯ ರೈಲ್ವೆ ಗೇಟ್ ಹತ್ತಿರ ನಡೆದಿದೆ. ಸುಮಾರು 50 ವರ್ಷದ ಅಪರಿಚಿತ ಪುರುಷನ ಶವ ಸಿಕ್ಕಿದೆ. ಆದ್ರೇ, ಅಸುನೀಗಿರುವ ವ್ಯಕ್ತಿಯ ಬಗ್ಗೆ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.