ವಿಜಯಪುರ : ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಯನ್ನು ಏಪ್ರಿಲ್ 10 ರಂದು ಬೆಳಗ್ಗೆ 10 ಗಂಟೆಗೆ ಇಂಚಗೇರಿಯಲ್ಲಿ ಉದ್ಘಾಟನೆ ಆಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮಿ ಹೇಳಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಕುದುರೆ ಮೇಲೆ ಕುಳಿತಿರುವ ಆಕರ್ಷಕ ಮೂರ್ತಿ ಇದಾಗಿದ್ದು ಬೆಳಗಾವಿಯಲ್ಲಿ ತಯಾರಿಸಲಾಗಿದೆ ಎಂದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಮಾರು 25 ಸಾವಿರಕ್ಕೂ ಅಧಿಕ ಸಮಾಜ ಬಾಂಧವರು ಹಾಗೂ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದರು.