ಹಿರೇರೂಗಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ
ಇಂಡಿ: ಜೀವನಕ್ಕಾಗಿ ಎರಡು ಹನಿ ಎಂಬ ಧ್ಯೇಯದೊಂದಿಗೆ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಇಂದು ಮೊದಲನೇ ಹಂತದ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಯುವಮುಖಂಡ ಪರಶುರಾಮ ಹೊಸಮನಿ ಮಕ್ಕಳಿಗೆ ಡ್ರಾಪ್ ಹಾಕುವ ಮೂಲಕ ಚಾಲನೆ ನೀಡಿದರು.
ಅವರು ಮಾತನಾಡಿ, ಪೋಲಿಯೊ ವೈರಸ್ ಅನ್ನು ತಡೆಗಟ್ಟಲು ನವಜಾತ ಶಿಶುವಿನಿಂದ ಐದು ವರ್ಷದೊಳಗಿನ ಪ್ರತಿ ಮಗುವಿಗೂ ಪಲ್ಸ್ ಪೋಲಿಯೊ ಲಸಿಕೆಯನ್ನು ನೀಡಲಾಗುತ್ತದೆ. ಎಲ್ಲರೂ ತಪ್ಪದೇ ತಮ್ಮ ಮನೆಯ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ, ಅವರ ನೆಮ್ಮದಿಯ ನಾಳೆಗಳನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಸಂತೋಷ ಕೋಟಗೊಂಡ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.