ವಚನ ಸಾಹಿತ್ಯ ಸಂರಕ್ಷಕ ಮಡಿವಾಳ ಮಾಚಿದೇವ –ಸಂತೋಷ ಬಂಡೆ
ಇಂಡಿ: 12ನೇ ಶತಮಾನದಲ್ಲಿ ಹಿಂದುಳಿದ ಹಾಗೂ ಶ್ರಮಜೀವಿಗಳ ಸಮಾನತೆಗೆ ಸಾಮಾಜಿಕ ಕ್ರಾಂತಿ ಮಾಡಿದವರಲ್ಲಿ ಮಾಚಿದೇವರು ಒಬ್ಬರು. ಅವರು ಮೇಲುಕೀಳು, ಬಡವರು, ಸಾಮಾಜಿಕ ಬಹಿಷ್ಕಾರ ಹಾಗೂ ಶೋಷಣೆಗೊಳಗಾದವರ ಬಗ್ಗೆ ಚಿಂತಿಸಿದ ಧೀರ ಶರಣರಾಗಿದ್ದರು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಮಡಿವಾಳ ಮಾಚಿದೇವರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ‘ಕಲಿದೇವರ ದೇವಾ’ ಎಂಬ ವಚನಾಂಕಿತದೊಂದಿಗೆ ವಿಶ್ವ ಧರ್ಮದ ನೈತಿಕ ಆಚರಣೆ ತತ್ವಗಳ ಮೇಲೆ ಅವರು ರಚಿಸಿದ ವಚನಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆೆ. ಅವರ ವಚನದ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ರೂಢಿಸಿಕೊಂಡು, ಬದುಕಿನಲ್ಲಿ ಏಕತೆಯನ್ನು ಕಂಡುಕೊಂಡು, ಮಾನವೀಯ ಮೌಲ್ಯಗಳ ಅಡಿಯಲ್ಲಿ ನೆಮ್ಮದಿಯ ಬದುಕನ್ನು ಸಾಗಿಸಬೇಕು ಎಂದು ಹೇಳಿದರು.
ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಮಡಿವಾಳ ಮಾಚಿದೇವರು ಮನದ ಮೈಲಿಗೆ ಕಳೆದ ಸರ್ವ ಶ್ರೇಷ್ಠ ಶರಣ, ದಿಟ್ಟ ಗಣಾಚಾರಿ. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ ಮಾತನಾಡಿ, ಶರಣರಲ್ಲಿಯೇ ಧೀರ-ದಿಟ್ಟ ವ್ಯಕ್ತಿಯಾಗಿ ವಚನ ಸಾಹಿತ್ಯವನ್ನು ರಕ್ಷಿಸಿದವನು ಮಾಚಯ್ಯ. ತಮ್ಮ ವಚನಗಳ ಮೂಲಕವೇ ಸಮ ಸಮಾಜಕ್ಕೆ ಹೋರಾಡಿ – ದವರು ಎಂದು ಹೇಳಿದರು. ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕರಾದ ಎಸ್ ಎಂ ಪಂಚಮುಖಿ, ಸುರೇಶ ದೊಡ್ಯಾಳಕರ,ಶಾಂತೇಶ ಹಳಗುಣಕಿ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಎಸ್ ವ್ಹಿ ಬೇನೂರ, ಎಫ್ ಎ ಹೋರ್ತಿ,ಯಲ್ಲಮ್ಮ ಸಾಲೋಟಗಿ, ಆಶಾ ಕೋರಳ್ಳಿ, ಸಂತೋಷ ಬಿರಾದಾರ ಸೇರಿದಂತೆ
ಅನೇಕರು ಉಪಸ್ಥಿತರಿದ್ದರು.