ಅಫಜಲಪುರ : ಪಟ್ಟಣದಲ್ಲಿ ನಡೆದ 2022-23 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮಣ್ಣೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಖೋ ಖೋ ಪಂದ್ಯಾವಳಿಯಲ್ಲಿ ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು ಸರ್ವ ಶಿಕ್ಷಕ ವೃಂದದವರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು, ಎಸ್ ಡಿ ಎಂ ಸಿ ಅದ್ಯಕ್ಷ, ಸದಸ್ಯರು ಗ್ರಾಮಸ್ಥರು ಅಭಿನಂದಿಸಿದ್ದಾರೆ.