ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ವಾಲ್ಮೀಕಿಯವರ ಜೀವನ ಸಂದೇಶ ಮೌಲ್ಯಗಳು ಇಂದಿಗೂ ಪ್ರಸ್ತುತ: ಸಂಗಮೇಶ ಬಬಲೇಶ್ವರ
ವಿಜಯಪುರ, ಅಕ್ಟೋಬರ್ 17 : ರಾಮಾಯಣ ಮಹಾಕಾವ್ಯ ರಚಿಸಿದ ವಾಲ್ಮೀಕಿಯವರ ಜೀವನ ಸಂದೇಶಗಳ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದರದಲ್ಲಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯನ್ನು ತಿಳಿಸಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ಪಾಲಕರು ಮುತುವರ್ಜಿವಹಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ಭಾರತ ದೇಶವಷ್ಟೇ ಅಲ್ಲದೇ ನೇಪಾಳ, ಬಾಂಗ್ಲಾ ದೇಶದಲ್ಲಿಯೂ ಕೂಡಾ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಭಾರತದ ಮಣ್ಣಿನಲ್ಲಿ ರಚನೆಗೊಂಡ ಮೊದಲ ಮಹಾಕಾವ್ಯ ರಾಮಾಯಣ ಎಂದು ಹೇಳಿದರು.
ಪ್ರತಿಯೊಬ್ಬರು ಚಿಕ್ಕ ವಯಸ್ಸಿನಲ್ಲಿ ರಾಮಾಯಣದ ಕಥೆಗಳನ್ನು ಕೇಳಿರುತ್ತೇವೆ. ಗುರು ಹಿರಿಯರ ಮಾತುಗಳು, ಕಥೆಗಳು ಮಕ್ಕಳಿಗೆ ಪ್ರೇರಣಾದಾಯಕವಾಗಬೇಕು. ಜೀವನದಲ್ಲಿ ಸಮಸ್ಯೆಗಳು ಬಂದರೆ ಅದನ್ನು ಎದುರಿಸುವ ಛಲ ಮಕ್ಕಳಲ್ಲಿ ಬೆಳೆಸಬೇಕು. ಸಮಾಜದ ಏಳ್ಗೆಗಾಗಿ ಶ್ರಮಿಸಿದ ಮಹನೀಯರ ಬದುಕು ಹಾಗೂ ಅದರ್ಶಗಳಿಗೆ ಎಲ್ಲಾ ಸಮಾಜದಿಂದ ಗೌರವ ಸಲ್ಲಿಸಬೇಕು. ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರ ಜೀವನ ಸಾಧನೆ, ರಾಮಾಯಣ ಹಾಗೂ ಶ್ಲೋಕಗಳ ಬಗ್ಗೆ ವಿವರವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್.ರಾಠೋಡ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ್, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಉಪ ನಿರ್ದೇಶಕರಾದ ಡಾ. ಅಶೋಕ ಎಸ್. ಘೋಣಸಗಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ಕೆ. ಹೊಸಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀಮತಿ ಉಮಾದೇವಿ ಸೊನ್ನದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್. ದೀಪಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ಮತ್ತಿತರರರು ಇದ್ದರು.
ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದ ಕುಮಾರಿ ಪೂರ್ಣಿಮಾ, ಭಾರತಿ ಸಂಗಡಿಗರಿAದ ಪ್ರಾರ್ಥನಾ ಗೀತೆ, ವೀರೇಶ್ ವಾಲಿ ತಂಡದವರಿಂದ ನಾಡಗೀತೆ ಪ್ರಸ್ತುತ ಪಡಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜಯಪುರದ ರಂಗನಾಥ ಬತ್ತಾಸೆ ಅವರ ತಂಡದಿಂದ ಶ್ರೀ ಮಹರ್ಷಿ ವಾಲ್ಮೀಕಿಯವರ ಜೀವನ ಕುರಿತಾದ ನೃತ್ಯರೂಪಕ ಪ್ರಸ್ತುತಪಡಿಸಲಾಯಿತು.
ಮೆರವಣಿಗೆ ಜಾಥಾ:
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಮೆರವಣಿಗೆಯೂ ನಗರದ ಲಾಲ್ ಬಹದ್ದೂರ್ ಶಾಸ್ತಿç ಮಾರುಕಟ್ಟೆ ರಸ್ತೆ ಮೂಲಕ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮೂಲಕ ರಂಗಮಂದಿರ ತಲುಪಿತು. ಮೆರವಣಿಗೆಯಲ್ಲಿ ಗೊಂಬೆ ಕುಣಿತ, ಕರಡಿ ಮಜಲು ಸೇರಿದಂತೆ ವಿವಿಧ ವಾದ್ಯಮೇಳ ಹಾಗೂ ಕಲಾ ತಂಡಗಳು ಆಕರ್ಷಕ ಪ್ರದರ್ಶನ ನೀಡಿದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಎಸ್. ಗುಣಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ. ಇಂಡಿ, ಜಿಲ್ಲಾ ಸಂಖ್ಯೆ ಸಂಗ್ರಹಣಾ ಇಲಾಖೆಯ ಪ್ರಭಾರ ಅಧಿಕಾರಿ ಇಲಾಖೆಯ ಅಲ್ತಾಪ ಅಹ್ಮದ. ಬಿ. ಮಣಿಯಾರ, ವಿವಿದ ಸಮಾಜದ ಮುಖಂಡರಾದ ಸಿದ್ಧರಾಮ ಕೋಳಿ, ಅಂಬಣ್ಣ ನಾಟಿಕರ, ಮಲ್ಲಿಕಾರ್ಜುನ ಬಟಗಿ, ರವಿ ಬಿಸನಾಳ, ಅಮರೇಶ ಕಾಮನಕೇರಿ, ಸೋಮು ಜಮಾದಾರ, ಸಂಜೀವಕುಮಾರ ನಾಯ್ಕೋಡಿ, ಶರಣಗೌಡ ಪಾಟೀಲ, ನಿಂಗಪ್ಪ ನಾಟೀಕಾರ, ಈರಪ್ಪ ಯಡಹಳ್ಳಿ, ವಿಶ್ವನಾಥಗೌಡ ಬಟಗಿ, ಅಮಿತ ನಾಯ್ಕೋಡಿ, ಪರಶುರಾಮ ದಿಂಡವಾರ, ಸಾಯಬಣ್ಣ ಬಾಗೇವಾಡಿ, ವಿವೇಕಾನಂದ ಡಬ್ಬಿ, ಮಲ್ಲು ತಳವಾರ, ಪ್ರಕಾಶ ಗುಡಿಮನಿ, ಚಂದ್ರು ತಳವಾರ, ಸಿದ್ಧರಾಮ ತಳವಾರ, ದೇವೇಂದ್ರ ಮೆರೇಕರ್, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ, ವಿದ್ಯಾವತಿ ಅಂಕಲಗಿ, ಸಿದ್ದು ರಾಯಣ್ಣವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



















