ದಿ.9ರಂದು ಸಾರಿಗೆ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ
ವಿಜಯಪುರ, ಜ.7: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅನಾವರಣ ಕಾರ್ಯಕ್ರಮವು ಇದೇ ಜ.9ರಂದು ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಅಂದು ಸಂಚಾರ ದಟ್ಟಣೆ ನಿಯಂತ್ರಿಸಲು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 4 ಗಂಟೆಯವರೆಗೆ ಕೇಂದ್ರ ಬಸ್ ನಿಲ್ದಾಣದಿಂದ ಸಾರಿಗೆ ಬಸ್ಸುಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.
ಅಂದು ವಿವಿಧ ಮಾರ್ಗಗಳ ಸಾÀರಿಗೆ ಬಸ್ಸುಗಳನ್ನು ಹೊರವಲಯಗಳಿಂದ ಕಾರ್ಯಾಚರಣೆ ಮಾಡಲಾಗುವುದು. ಸೆಟ್‌ಲೈಟ್ ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಾಗುವ ಸಾರಿಗೆ ಬಸ್ಸುಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಅಂದು ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ ಮಾರ್ಗದ ನಗರ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















