ವಿಸಿ ಮೂಲಕ ಸಭೆ ನಡೆಸಿದ ಗುಮ್ಮಟ ನಗರಿಯ ಜಿಲ್ಲಾಧಿಕಾರಿ
ವಿಜಯಪುರ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂದಿನ 6 ತಿಂಗಳ ಅವಧಿಗೆ ಕುಡಿಯುವ ನೀರಿಗಾಗಿ ಯಾವುದೇ ಸಮಸ್ಯೆ ಬಾರದಂತೆ ಮುಂಜಾಗ್ರತೆ ಕ್ರಮವಾಗಿ ಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ಥಾನ ಸಭಾಂಗಣದಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲೆಯ ವಿವಿಧ ತಹಶೀಲ್ದಾರಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರನ್ನೊಳಗೊಂಡ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಕೆರೆಗಳಲ್ಲಿ ಶೇಖರಿಸಿಟ್ಟಿರುವ ನೀರಿನ್ನು ಕುಡಿಯುವ ನೀರಿಗಾಗಿ ಬಳಕೆ ಮಾಡಿಕೊಳ್ಳಲು ಹಗಲು ರಾತ್ರಿ ಸಿಬ್ಬಂದಿಗಳನ್ನು ನಿಯೋಜಿಸಿ ನಿಗಾ ವಹಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕೆರೆಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಿ ತೀವ್ರ ವಹಿಸಬೇಕು. ಕಾಲಕಾಲಕ್ಕೆ ಕೆರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿ,ನೀರು ಪೋಲಾಗದಂತೆ ತೀವ್ರ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಸ್ಥಳೀಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ, ರಾತ್ರಿ ಸಹ ತಂಡ ರಚಿಸಿಕೊಂಡು ಜಿಪಿಎಸ್ ಮೂಲಕ ಮಾಹಿತಿ ಪಡೆದುಕೊಳ್ಳಬೇಕು. ಕಾಲಕಾಲಕ್ಕೆ ಪರಿಶೀಲನೆ ನಡೆಸುವುದರ ಮೂಲಕ ನೀರು ಪೋಲಾಗದಂತೆ ಎಂದು ಅವರು ಹೇಳಿದರು. ನೋಡಿಕೊಳ್ಳಬೇಕು
ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಗತ್ಯ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನಿಡಿದರು.
ಬಾಲಕಾರ್ಮಿಕ ಪದ್ಧತಿ ನಿಷೇಧ : ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸುವಂತೆ ಪರಿಣಾಮಕಾರಿಯಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ ಸಭಾಂಗಣದಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ಮಂಗಳವಾರ 2023-24 ಸಾಲಿನ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆವಹಿಸಿದ್ದ ಅವರು, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಕಾಯ್ದೆ ಕುರಿತು ಸೂಕ್ತ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಿಗೆ ಕಾಯ್ದೆ ಕುರಿತು ತಿಳುವಳಿಕೆ ಮೂಡಿಸಬೇಕು. ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಕಾಯ್ದೆ ಉಲ್ಲಂಘಿಸಿ ಬಾಲಕಾರ್ಮಿಕರನ್ನು ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದವರನ್ನು ಪತ್ತೆ ಹೆಚ್ಚಿ ಬಾಲಕಾರ್ಮಿಕರು ಇರುವುದನ್ನು ಖಚಿತಪಡಿಸಿಕೊಂಡು ತಹಶೀಲ್ದಾರ ಅವರ ನೇತೃತ್ವದಲ್ಲಿ ಅನಿರೀಕ್ಷಿತವಾಗಿ ದಾಳಿ ನಡೆಸಿ ಬಾಲಕಾರ್ಮಿಕರ ರಕ್ಷಣೆ ಮಾಡಿ, ರಕ್ಷಣೆಗೊಳಗಾದ ಬಾಲಕಾರ್ಮಿಕರಿಗೆ ಪುನರವಸತಿ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಶಿಕ್ಷಣ ಹಾಗೂ ಕಾರ್ಮಿಕ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬಾಲಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕುರಿತು ಸೂಕ್ತ ಜಾಗೃತಿ- ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.
ಯುವನಿಧಿ ಪೋಸ್ಟರ್ ಬಿಡುಗಡೆ : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆ ನೊಂದಣಿ ಪ್ರಕ್ರಿಯೆ ಡಿ.26ರಿಂದ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಯುವನಿಧಿ ಪೋಸ್ಟರ್‌ನ್ನು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲ್ಲಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.