ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು
ವಿಜಯಪುರ: ಇಟ್ಟಂಗಿಹಾಳ ರಸ್ತೆಯಲ್ಲಿರುವ ಕೆ. ಎಚ್. ಬಿ. ಕಾಲನಿಗೆ ಮುಂಬರುವ ದಿನಗಳಲ್ಲಿ ರಿಂಗ್ ರಸ್ತೆಯೊಂದಿಗೆ ಸಂಪರ್ಕ ಕಲ್ಪಿಸಿ, ಹೈಮಾಸ್ಟ್ ವಿದ್ಯುತ್ ದೀಪ, ಬಸ್ ಸೌಕರ್ಯ , ಚರಂಡಿ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಇಂದು ರವಿವಾರ ಕೆ. ಎಚ್.ಬಿ. ಕಾಲೋನಿಗೆ ರೂ. 90 ಲಕ್ಷ ವೆಚ್ಚದ ನೀರು ಸರಬರಾಜು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು ನಂತರ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಬಡಾವಣೆಯ ನಾಗರಿಕರು 1500 ಗಿಡ ನೆಟ್ಟಿರುವುದು ಸಂತಸದ ತಂದಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಮೂಲಕ ಜಿಲ್ಲೆಯಲ್ಲಿ ಅರಣ್ಯ ಸರಾಸರಿ ಹೆಚ್ಚಿಸಲು ಎಲ್ಲರೂ ಸತತ ಪ್ರಯತ್ನ ಮುಂದುವರೆಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಭೀಮಸಿಂಗ್ ಮಹಾರಾಜ, ಧನಸಿಂಗ್ ಮಹಾರಾಜ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲ್ ಹಮೀದ್ ಮುಶ್ರಿಫ್, ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಗೋವಿಂದ, ಮುಖಂಡರಾದ ಶಿವಾನಂದ ಕೆಲೂರ, ಪಿ. ಬಿ. ಪಾಟೀಲ, ಬಿ. ಎ. ಪಾಟೀಲ, ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
1 Minister MBP Ittingihal KHB Water Bhumipuje
ವಿಜಯಪುರ ನಗರದ ಹೊರಬಲಯದ ಇಟ್ಟಂಗಿಹಾಳ ರಸ್ತೆಯಲ್ಲಿರುವ ಕೆ. ಎಚ್. ಬಿ. ಕಾಲನಿಗೆ ರೂ. 90 ಲಕ್ಷ ವೆಚ್ಚದಲ್ಲಿ ನೀರು ಸರಬರಾಜು ಮಾಡುವ ಕಾಮಗಾರಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಭೀಮಸಿಂಗ್ ಮಹಾರಾಜ, ಧನಸಿಂಗ್ ಮಹಾರಾಜ, ಕನ್ನಾನ್ ಅಬ್ದುಲ್ ಹಮೀದ್ ಮುಶ್ರಿಫ್, ಟಿ. ಭೂಬಾಲನ್ ಮುಂತಾದವರು ಉಪಸ್ಥಿತರಿದ್ದರು.
2 Minister MBP Ittingihal KHB Water Bhumipuje
ವಿಜಯಪುರ ನಗರದ ಹೊರಬಲಯದ ಇಟ್ಟಂಗಿಹಾಳ ರಸ್ತೆಯಲ್ಲಿರುವ ಕೆ. ಎಚ್. ಬಿ. ಕಾಲನಿಗೆ ರೂ. 90 ಲಕ್ಷ ವೆಚ್ಚದಲ್ಲಿ ನೀರು ಸರಬರಾಜು ಮಾಡುವ ಕಾಮಗಾರಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿದ ಬಳಿಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಭೀಮಸಿಂಗ್ ಮಹಾರಾಜ, ಧನಸಿಂಗ್ ಮಹಾರಾಜ, ಕನ್ನಾನ್ ಅಬ್ದುಲ್ ಹಮೀದ್ ಮುಶ್ರಿಫ್, ಟಿ. ಭೂಬಾಲನ್ ಮುಂತಾದವರು ಉಪಸ್ಥಿತರಿದ್ದರು.
3 Minister MBP Ittingihal KHB Water Bhumipuje
ವಿಜಯಪುರ ನಗರದ ಹೊರಬಲಯದ ಇಟ್ಟಂಗಿಹಾಳ ರಸ್ತೆಯಲ್ಲಿರುವ ಕೆ. ಎಚ್. ಬಿ. ಕಾಲನಿಗೆ ರೂ. 90 ಲಕ್ಷ ವೆಚ್ಚದಲ್ಲಿ ನೀರು ಸರಬರಾಜು ಮಾಡುವ ಕಾಮಗಾರಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಭೀಮಸಿಂಗ್ ಮಹಾರಾಜ, ಧನಸಿಂಗ್ ಮಹಾರಾಜ, ಕನ್ನಾನ್ ಅಬ್ದುಲ್ ಹಮೀದ್ ಮುಶ್ರಿಫ್, ಟಿ. ಭೂಬಾಲನ್ ಮುಂತಾದವರು ಉಪಸ್ಥಿತರಿದ್ದರು.



















