ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆ
ಹನೂರು: ವಿಶ್ವ ಕರ್ಮ ಜಯಂತಿ ಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿ ಗಣ್ಯ ವ್ಯಕ್ತಿಗಳ ಅತಿಥಿ ಗೃಹದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು
ಮಹನೀಯರ ಹಾಗೂ ಹಿರಿಯರ ಗೌರವಿಸುವುದು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಇದೀಗ ವಿಶ್ವಕರ್ಮ ಜಯಂತಿಯನ್ನು ಸಹ ಆಚರಣೆ ಮಾಡಲಾಗುತ್ತಿದ್ದು ಸಮುದಾಯದ ಮುಖಂಡರುಗಳ ಜೊತೆ ಚರ್ಚೆ ನಡೆಸಿ ಅಕ್ಟೋಬರ್ 1ರಂದು ದಿನಾಂಕ ನಿಗದಿಪಡಿಸಲಾಗಿದೆ ಅಂದು ಬೆಳಿಗ್ಗೆ 9ಗಂಟೆಗೆ
ಆರ್ ಎಂ ಸಿ ಆವರಣದಿಂದ ಸಿದ್ದಪ್ಪಾಜಿ ದೇವಾಲಯದ ವರೆಗೆ ಮೆರವಣಿಗೆ ನಡೆಯುತ್ತದೆ. ಬಳಿಕ ವೇದಿಕೆ ಕಾರ್ಯಕ್ರಮ ಮೂಲಕ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಜಯಂತಿಯಲ್ಲಿ ಯಾವುದೇ ರೀತಿಯ ಲೋಕದೋಷವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಯಶಸ್ವಿ – ಗೊಳಿಸುವುದಕ್ಕೆ ಬೇಕಾಗುವ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಇದೆ ವೇಳೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಗುರು ಪ್ರಸಾದ್, ಸಿಡಿಪಿಓ ನಂಜುಮಣಿ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ, ದೈಹಿಕ ಪರಿವೀಕ್ಷಕ ಮಹದೇವ್, ಅಗ್ನಿ ಶಾಮಕ ದಳ ಸಿಬ್ಬಂದಿ ಮಹೇಶ್,ಮುಖಂಡರಾದ ತಮ್ಮಯಚಾರಿ, ನಾಗಚಾರಿ ,ಮುತ್ತುರಾಜು, ದೊರೆ, ರಾಮಾಚಾರಿ,ಮುತ್ತು, ವೀರಚಾರಿ, ಆರ್. ರಾಚಪ್ಪಾಜಿ, ಬಂಡಳ್ಳಿ ಸೀನಣ್ಣ, ರಘು, ಬಸವಣ್ಣ ಮುಂತಾದವರು ಹಾಜರಿದ್ದರು.