Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ
ಇಂಡಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಸಳಿ ಬಿ.ಕೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು Voice ofJANATAA ಸುದ್ದಿ ಪ್ರಕಟಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಸ್ಯೆಯ ಕುರಿತು ಪರಿಶೀಲನೆ ನಡೆಸಿ, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ್ದಾರೆ.
ಮಸಳಿ ಬಿ.ಕೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ಎದುರಿಸುತ್ತಿದ್ದ ತೊಂದರೆಗಳ ಕುರಿತು Voice ofJANATAA ವರದಿ ಪ್ರಕಟಿಸಿತ್ತು. ವರದಿಯ ಬಳಿಕ ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗ್ರಾಮಸ್ಥರಿಗೆ ಸಮರ್ಪಕ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದು, ಸಮಸ್ಯೆ ಶೀಘ್ರ ಪರಿಹಾರವಾಗುವ ನಿರೀಕ್ಷೆ ಗ್ರಾಮಸ್ಥರಲ್ಲಿ ಮೂಡಿದೆ.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ ರಾಠೋಡ, ಸಿಬ್ಬಂದಿಗಳಾದ ಗಂಗಾಧರ ಮರಡಿ, ಸೋಮನಾಥ ಶಿರಗೊಂಡ, ಬಾಬು ಯಲಗಾರ್, ಸಿಪಾಯಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಜನರ ಪರವಾಗಿ ನಿರಂತರ ವರದಿ ಮಾಡುವ Voice ofJANATAA ಡಿಜಿಟಲ್ ನ್ಯೂಸ್ನ ವರದಿಗೆ ಸ್ಪಂದಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುವುದು ಗಮನಾರ್ಹವಾಗಿದೆ.
Voice ofJANATAA — ಜನರ ಧ್ವನಿ, ಜನರಿಗಾಗಿ!
















