ಏನಿದು ಯುವನಿಧಿ ಯೋಜನೆ..? ಇಂದು ಚಾಲನೆ..!
Voice Of Janata: Editor : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ.
ಹೌದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟ್ ಘೋಷಣೆಯಾಗಿರುವ ಯುವ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರದಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ.
ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಚಾಲನೆ ಕೊಡಲಿದ್ದಾರೆ.
ಮೊದಲ ಕಂತಿನ ಹಣ ಬಿಡುಗಡೆ : ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು :
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಟುಕ್, ಎಸ್. ಎಸ್.ಎಲ್.ಸಿ. ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ದಾಖಲೆಗಳು ಬೇಕು.
ಅರ್ಜಿ ಸಲ್ಲಿಸುವ ಸ್ಥಳಗಳು :
ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‌ಗಳಲ್ಲಿ