ಲಿಂಗಸೂಗೂರು: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮಾಜದ ಜೊತೆ ಬೆರತು ಜನರ ಕುಂದು ಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಲಿಂಗಸೂಗೂರು DySp ಎಸ್. ಮಂಜುನಾಥ ಹೇಳಿದರು.
ತಾಲೂಕಿನ ನಾಗರಹಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ DySp ಎಸ್. ಮಂಜುನಾಥ್ ನೇತೃತ್ವದಲ್ಲಿ ಎಸ್ ಸಿ ಎಸ್ ಟಿ ಸಭೆಯನ್ನು ಕರೆಯಲಾಗಿತ್ತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಅತೀ ಹೆಚ್ಚು ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೊಂದಿರುವ ಹಳ್ಳಿಗಳನ್ನು ಗುರುತಿಸಿ, ಅಂತಹ ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸುವದಾಗಿದೆ.
ಇನ್ನು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದರೆ ಕೂಡಲೇ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಅಲ್ಲದೆ ಮಹಿಳೆ ಮತ್ತು ಮಕ್ಕಳ ಮೇಲೆ ಲೈಗಿಂಕ ದೌರ್ಜನ್ಯ ಹಾಗೂ ಮುಂತಾದವುಗಳನ್ನು ಮಾಡಿದರೆ ಫೊಕ್ಸೋ ಕಾಯ್ದೆಯ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಲಾಗುತ್ತದೆ.
ಹಳ್ಳಿಗಳಲ್ಲಿ ಹೊಟೇಲ್, ಕಟಿಂಗ್ ಶಾಪ್, ಕುಡಿಯುವ ನೀರು ತುಂಬುವ ಸ್ಥಳಗಳಲ್ಲಿ ದಲಿತರಿಗೆ ಅವಮಾನ ವಾಗುವಂತಹ ರೀತಿಯಲ್ಲಿ ಯಾರೂ ನಡೆದುಕೊಳ್ಳಬಾರದು. ಸಮಾಜದಲ್ಲಿ ಎಲ್ಲರೂ ಸಾಮರಸ್ಯದಿಂದ ಬಾಳಬೇಕು ಎಂದರು.
ಈ ಸಂದರ್ಭದಲ್ಲಿ ಮುದಗಲ್ ಠಾಣೆಯ ಪಿಎಸ್ಐ ಪ್ರಕಾಶ್ ರೆಡ್ಡಿ ಡಂಬಳ್ ಹಾಗೂ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.