ಇಂಡಿ ನಗರದ ಬಸವೇಶ್ವರ ವೃತ್ ದಲ್ಲಿ ಭೀಕರ ಅಪಘಾತದಲ್ಲಿ ಮಹಿಳೆ ಚಿಂತಾಜನಕ ಸ್ಥಿತಿಯಲ್ಲಿ..!
ಇಂಡಿ: ನಗರದ ಬಸವೇಶ್ವರ ಸರ್ಕಲ್ ಸಮೀಪ ಪಾದಚಾರಿ ಮಹಿಳೆಯೊಬ್ಬರ ಮೇಲೆ ಬಸ್ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಮಹಿಳೆಗೆ ತೀವ್ರ ರಕ್ತಸ್ರಾವವಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಅವರನ್ನು ಇಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಗಾಯಗೊಂಡ ಮಹಿಳೆ ಯಾರು ಎಂಬುದು ಇನ್ನೂ ಗುರುತಾಗಿಲ್ಲ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
ಗಾಯಗೊಂಡ ಮಹಿಳೆಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

















