ಮುದ್ದೇಬಿಹಾಳ: ಪಟ್ಟಣದ ಹಸಿರು ತೋರಣ ಗೆಳೆಯರ ಬಳಗವು ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ “ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನಿಸಿದೆ. ಪ್ರಶಸ್ತಿಗಳನ್ನು ಪರಿಸರ ಕ್ಷೇತ್ರದಲ್ಲಿ ಗಿಡಗಳನ್ನು ನೆಟ್ಟು, ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಸಂಘ, ಸಂಸ್ಥೆಗಳಿಗೆ ಜೂನ್ 5 ರಂದು ನಡೆಯುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಆಸಕ್ತರು ತಮ್ಮ ಅರ್ಜಿಗಳನ್ನು ಇದೇ ಜೂನ್ 3 ರೊಳಗೆ ಅಧ್ಯಕ್ಷರು, ಹಸಿರು ತೋರಣ ಗೆಳೆಯರ ಬಳಗ, 10 ನೇ ಕ್ರಾಸ್, ಹುಡ್ಕೋ ಬಡಾವಣೆ ಮುದ್ದೇಬಿಹಾಳ 586212 ಇವರಿಗೆ ತಲುಪಿಸುವಂತೆ ಅಥವಾ ಯಾರಾದರೂ ಈ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ಅವರ ಹೆಸರುಗಳನ್ನು ಶಿಫಾರಸು ಮಾಡಬಹುದು. ಹೆಚ್ಚಿನ ಮಾಹಿತಿಗೆ ಮೊ. 6363020440, 9449431022, 9448442101 ಸಂಖ್ಯೆಗೆ ಸಂಪರ್ಕಿಸುವಂತೆ ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ, ಕಾರ್ಯದರ್ಶಿ ಅಮರೇಶ ಕೆ. ಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.