ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ವಿಜಯಪುರ ಆಗಸ್ಟ್ ೪: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅ.೧ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿಇರಯ ನಾಗರಿಕರಿಗೆ ೬ ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆಗೆ ಸೇರಿ ಒಟ್ಟು ೭ ಪ್ರಶಸ್ತಿ ನೀಡಲಾಗುವುದು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ ವಿಜಯಪುರ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ : ೨೫-೦೮-೨೦೨೫ರೊಳಗಾಗಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಕೆಂಪಲಿAಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.