ವಿಜಯಪುರ : ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯ ಇಲ್ಲ. ಕುರಾನ್ ನಲ್ಲೂ ಇಲ್ಲ ಎಂದು ವಿಜಯಪುರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಹೈಕೋರ್ಟ್ ತೀರ್ಪು ನೀಡಿದಾಗಲೇ ಮುಸ್ಲಿಂ ಮುಖಂಡರು ಆ ಆರು ಹೆಣ್ಣು ಮಕ್ಕಳಿಗೆ ಬೈದು ಬುದ್ದಿ ಹೇಳಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಸದ್ಯ ದ್ವಿಸದಸ್ಯ ಪೀಠ ವಿಭಿನ್ನ ಅಭಿಪ್ರಾಯ ನೀಡಿದ್ದು ಅದನ್ನು ಪ್ರಶ್ನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಸಮಾನತೆಗೆ, ಸಂವಿಧಾನಕ್ಕೆ ಆದ್ಯತೆ ಕೊಡಬೇಕು. ಐದು ಅಥವಾ ಏಳು ಜನರ ನ್ಯಾಯಾಧೀಶರ ತೀರ್ಪು ಏನಾಗಲಿದೆ ಎಂಬುದು ನೋಡಬೇಕು ಎಂದರು. ಅಲ್ಲದೇ, ಆರು ಮಕ್ಕಳಿಗೆ ಬುದ್ದಿ ಹೇಳಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಬೆಂಕಿ ಹಚ್ಚುವ ಕೆಲಸ ಆಗಿದ್ದರಿಂದ ಪರಿಸ್ಥಿತಿ ಇಲ್ಲಿಗೆ ಬಂದಿದೆ ಎಂದರು.