ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ
ಇಂಡಿ.: ನಮಗಾಗಿ ಹಾಗೂ ಸಮಾಜಕ್ಕಾಗಿ ಯೋಗʼ ಎನ್ನುವುದು ಈ ವರ್ಷ ಥೀಮ್ ಆಗಿದೆ. ಯೋಗವು ವೈಯಕ್ತಿಕ ಆರೋಗ್ಯ ಮಾತ್ರವಲ್ಲದೇ, ಸಾಮಾಜಿಕ ಯೋಗಕ್ಷೇಮಕ್ಕೂ ಕೊಡುಗೆ ನೀಡುತ್ತದೆ. ಇದು ವೈಯಕ್ತಿಕ ಮತ್ತು ಸಾಮೂಹಿಕ ಆರೋಗ್ಯದ ಪರಸ್ಪರ ಸಂಬಂಧವನ್ನು ಒತ್ತಿಹೇಳುತ್ತದೆ. ಯೋಗವನ್ನು ವೈಯಕ್ತಿಕ ಬೆಳವಣಿಗೆ ಮತ್ತು ಸಾಮಾಜಿಕ ಸುಧಾರಣೆಗೆ ಸಾಧನವಾಗಿ ಉತ್ತೇಜಿಸುತ್ತದೆ ಎಂಬುದು ಈ ಥೀಮ್ನ ಅರ್ಥವಾಗಿದೆ. ಎಂದು ಮುಖ್ಯಗುರು ಅಬುತಾಲಿಬ ಹೂಸುರ ಹೇಳಿದರು.
ತಾಲೂಕಿನ ಹೀರೆ ಮಸಳಿ ಗ್ರಾಮದ ಸರಕಾರಿ ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಭಾರತ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿ ಯೋಗ ದಿನಾಚರಣೆ ರೂಢಿಯಲ್ಲಿದೆ. ಇಂದು ಪ್ರಪಂಚದಾದ್ಯಂತ ಜನರು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗ ಪದ್ಧತಿಯು ಹುಟ್ಟುಕೊಂಡಿದ್ದು ಭಾರತದಲ್ಲಿ, ಸುಮಾರು 5000 ವರ್ಷಗಳ ಹಿಂದೆ ಭಾರತದಲ್ಲಿ ಯೋಗ ಪದ್ಧತಿ ರೂಢಿಯಲ್ಲಿತ್ತು ಎನ್ನಲಾಗುತ್ತದೆ. ಯೋಗವನ್ನು ಇಂದು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಜನರು ಅಭ್ಯಾಸ ಮಾಡುತ್ತಿದ್ದಾರೆ. ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಪ್ರತಿವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ.
ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಬಶೀರ ಮುಲ್ಲಾ, ಸದಸ್ಯರಾದ ಇಬ್ರಾಹಿಂ ಉಸ್ತಾದ, ಶಿಕ್ಷಕರಾದ ಕೆ.ಕೆ.ಹಲಕಟ್ಟಿ, ಎಸ್.ಎಂ.ತುರ್ಕಿ, ಕೆ.ಎ.ಶೇಖ, ಎಂ.ಎಚ್.ಬಿಳಗಿ, ಸೇರಿದಂತೆ ಇತರರು ಇದ್ದರು.