ಇಂಡಿ : ವೈಯಕ್ತಿಕ ಸಾಲಕ್ಕೆ ಬೇಸತ್ತು ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಮಾಲಪ್ಪ ಭೀಮಪ್ಪ ಲೋಕೂರ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಇನ್ನು ವೈಯಕ್ತಿಕ ಕಾರಣ ಸೇರಿದಂತೆ ಮಾನಸಿಕವಾಗಿ ಮನನೊಂದು ಇಂದು ತಡವಲಗಾ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.