ಲಿಂಗಸೂಗೂರು: ಯುವ ಕವಿಯ ಸಾಹಿತ್ಯ ಸೇವೆ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ತಾಲೂಕಾ ಆಡಳಿತ ಪ್ರಶಸ್ತಿ ಪ್ರಧಾನ ಮಾಡಿದೆ. ಡಾ॥ ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರವರ 131 ನೇ ಜಯಂತೋತ್ಸವ ಸಂದರ್ಭದಲ್ಲಿ ತಾಲೂಕಿನ ವಿಜಯದಾಸ ನವಲಿಯವರ ಸಾಹಿತ್ಯ ಸೇವೆ ಮತ್ತು ಸಾಮಾಜಿಕ ಸೇವೆಯನ್ನು ಪರಗಣಿಸಿ ಲಿಂಗಸೂಗೂರು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಶಾಸಕ ಡಿ.ಎಸ್. ಹೂಲಗೇರಿ, ಸಹಾಯಕ ಆಯುಕ್ತರಾದ ರಾಹುಲ್ ಸಂಕನೂರ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶು ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಸಿಬ್ಬಂದಿಗಳು, ಮುಖಂಡರು ಉಪಸ್ಥಿತರಿದ್ದರು.