ಉತ್ತರಪ್ರದೇಶ: ಯುವತಿ ಒಬ್ಬಳು ತನ್ನ ಬಳಿ ಪಿಸ್ತೂಲ್ ಇಟ್ಟುಕೊಂಡು ಓಡಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಉತ್ತರಪ್ರದೇಶದ ಮೈನ್ಪುರಿಯಲ್ಲಿ 19 ವರ್ಷದ ಯುವತಿ ಪಿಸ್ತೂಲ್ ಜತೆ ಸಿಕ್ಕುಬಿದ್ದು ಪೊಲೀಸರ ಅತಿಥಿಯಾಗಿದ್ದಾಳೆ. ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಯುವತಿಯ ಬಳಿ ಇದ್ದ ಪಿಸ್ತೂಲನ್ನು ವಶಪಡಿಸಿಕೊಳ್ಳುತ್ತಿರುವ ವಿಡಿಯೋ ಆನ್ಲೈನ್ನಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿದೆ. ಯುವತಿ ಯಾರು? ಪಿಸ್ತೂಲ್ ಹೇಗೆ ಬಂತು ಎಂದು ಪೊಲೀಸರು ಯುವತಿಯನ್ನು ತನಿಖೆಗೆ ಒಳಪಡಿಸಿದ್ದಾರೆ.