ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!
ವಿಜಯಪುರ ಜಿಲ್ಲೆಯ 45 ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ ಪ್ರಕಟ | 23 ಸ್ಥಾನ ಮಹಿಳೆಯರಿಗೆ ಮೀಸಲು | ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ
ವಿಜಯಪುರ: ಜಿಲ್ಲಾ ಪಂಚಾಯತಿ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತಿ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಪ್ರಕಟಿಸಿದ್ದು, ವಿಜಯಪುರ ಜಿಲ್ಲೆಯ ಒಟ್ಟು 45 ಜಿಲ್ಲಾ ಪಂಚಾಯತಿ ಕ್ಷೇತ್ರಗಳ ಮೀಸಲಾತಿ ವಿವರಗಳನ್ನು ಬಿಡುಗಡೆ ಮಾಡಿದೆ.
ಜಿಲ್ಲೆಯ 45 ಜಿಲ್ಲಾ ಪಂಚಾಯತಿ ಸ್ಥಾನಗಳ ಪೈಕಿ 23 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಕ್ಷೇತ್ರವಾರು ಮೀಸಲಾತಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಕಾಂಕ್ಷಿಗಳು ಹಾಗೂ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಹೆಚ್ಚಾಗುವ ನಿರೀಕ್ಷೆಯಿದೆ.
🔥 ಮೀಸಲಾತಿ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ!
ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಯಾರಿಗಾದರೂ ಆಕ್ಷೇಪಣೆಗಳಿದ್ದರೆ, ಮೀಸಲಾತಿ ಪ್ರಕಟವಾದ ದಿನದಿಂದ 10 ದಿನಗಳೊಳಗಾಗಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದು. ಅಕ್ಟೋಬರ್ 19ರ ಸಂಜೆ 5 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ಅವಕಾಶ ನೀಡಲಾಗಿದೆ.
📌 ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001.
ಆಕ್ಷೇಪಣೆಗಳನ್ನು ಖುದ್ದಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಎಲ್ಲರ ಗಮನ ಕ್ಷೇತ್ರವಾರು ಮೀಸಲಾತಿಯತ್ತ..! ಯಾವ ಕ್ಷೇತ್ರ ಯಾರಿಗೆ ಮೀಸಲು? ಚುನಾವಣಾ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿರುವ ಆಕಾಂಕ್ಷಿಗಳ ಮುಂದಿನ ನಡೆ ಏನು? ಮೀಸಲಾತಿ ಬದಲಾವಣೆಗೆ ಆಕ್ಷೇಪಣೆ ಸಲ್ಲಿಸುವವರಿಗೆ ಸರ್ಕಾರ ನೀಡಿರುವ ಕಾಲಾವಕಾಶ ಮಹತ್ವದ್ದಾಗಿದೆ.
📢 ಜಿಲ್ಲಾ ಪಂಚಾಯತಿ ಕ್ಷೇತ್ರವಾರು ಮೀಸಲಾತಿಯ ಸಂಪೂರ್ಣ ವಿವರಗಳಿಗಾಗಿ ನಮ್ಮ ಸುದ್ದಿಗಳನ್ನು ಗಮನಿಸುತ್ತಿರಿ.
















